ಮನೆ ರಾಜಕೀಯ ದಕ್ಷಿಣ ಶಿಕ್ಷಕರ ಕ್ಷೇತ್ರ: ಜೆಡಿಎಸ್ ಅಭ್ಯರ್ಥಿ ವಿವೇಕಾನಂದಗೆ ಬಿ ಫಾರಂ ನೀಡಿದ ಹೆಚ್​ ಡಿ ದೇವೇಗೌಡ

ದಕ್ಷಿಣ ಶಿಕ್ಷಕರ ಕ್ಷೇತ್ರ: ಜೆಡಿಎಸ್ ಅಭ್ಯರ್ಥಿ ವಿವೇಕಾನಂದಗೆ ಬಿ ಫಾರಂ ನೀಡಿದ ಹೆಚ್​ ಡಿ ದೇವೇಗೌಡ

0

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಿಜೆಪಿಯಿಂದ‌ ಇಸಿ ನಿಂಗರಾಜೇಗೌಡಗೆ ಟಿಕೆಟ್ ಫೈನಲ್ ಮಾಡಿ ಹೆಸರು ಘೋಷಣೆ ಮಾಡಿದ್ದರೂ ಜೆಡಿಎಸ್​​ ಕೂಡ ಅಭ್ಯರ್ಥಿ ಘೋಷಣೆ ಮಾಡಿದೆ.

Join Our Whatsapp Group

ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ವಿವೇಕಾನಂದ ಅವರನ್ನು ಆಯ್ಕೆ ಮಾಡಲಾಗಿದ್ದು, ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಾಗೂ ಶಾಸಕರಾದ ಜಿ ಟಿ ದೇವಗೌಡರ ಸಮ್ಮುಖದಲ್ಲಿ ಪಕ್ಷದ ವರಿಷ್ಠ ಹೆಚ್​ ಡಿ ದೇವೇಗೌಡ ಬಿ ಫಾರಂ ನೀಡಿದ್ದಾರೆ.

ಬಿಜೆಪಿ ಈಗಾಗಲೇ ಅಭ್ಯರ್ಥಿ ಘೋಷಣೆ ಮಾಡಿರುವುದರಿಂದ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಕುತೂಹಲ ಕೆರಳಿಸಿದೆ.

ಜೆಡಿಎಸ್‌ಗೆ ಈ ಕ್ಷೇತ್ರ ಬಿಟ್ಟುಕೊಡುವುದಾಗಿ ಬಿಜೆಪಿ ಹೈಕಮಾಂಡ್ ಈಗಾಗಲೇ ಸ್ಪಷ್ಟಪಡಿಸಿದೆ ಎಂದು ಮಾಜಿ ಶಾಸಕ ಸಾ.ರಾ. ಮಹೇಶ್ ಸುಳಿವು ನೀಡಿದ್ದರು. ಮೇ 15ಕ್ಕೆ ಅಭ್ಯರ್ಥಿಯನ್ನು ಅಂತಿಮಗೊಳಿಸುವುದಾಗಿಯೂ ಹೇಳಿದ್ದರು. ಅದರಂತೆಯೇ ಇಂದು ಅಭ್ಯರ್ಥಿಗೆ ಬಿ ಫಾರಂ ನೀಡಲಾಗಿದೆ. ಹೀಗಾಗಿ ಇದೀಗ, ಬಿಜೆಪಿಯ ಮುಂದಿನ ನಡೆ ಏನಿರಬಹುದು ಎಂಬ ಕುತೂಹಲ ಮೂಡಿದೆ.

ಹಿಂದಿನ ಲೇಖನನಂಜನಗೂಡು: ಶ್ರೀಕಂಠನ ಹುಂಡಿಯಲ್ಲಿ ಡೆತ್‌ ನೋಟ್‌ ಪತ್ತೆ
ಮುಂದಿನ ಲೇಖನನಕಲಿ ಜಾತಿ ಪತ್ರ: ಡಿಸಿವಿಸಿ ಶಿಫಾರಸ್ಸು ಮಾಡದೆ ನಾಗರಿಕ ಹಕ್ಕು ನಿರ್ದೇಶನಾಲಯ ಪ್ರಕರಣ ದಾಖಲಿಸಲಾಗದು- ಹೈಕೋರ್ಟ್‌