ಮೈಸೂರು(Mysuru): ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಒಳಗೊಂಡ ದಕ್ಷಿಣ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.
ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಅವರು ಸಹಾಯಕ ಪ್ರಾದೇಶಿಕ ಆಯುಕ್ತೆ ರೂಪಶ್ರೀ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಸುಬ್ರಹ್ಮಣ್ಯ ಅವರಿಗೆ ನಾಮಪತ್ರ ಸಲ್ಲಿಸಿದರು.
ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜತೆಗಿದ್ದರು. ಇದಕ್ಕೂ ಮುನ್ನ ಸಚಿವರಾದ ಎಸ್.ಟಿ.ಸೋಮಶೇಖರ್, ನಾರಾಯಣಗೌಡ, ಸಂಸದ ಪ್ರತಾಪಸಿಂಹ, ಶಾಸಕರಾದ ಎಲ್.ನಾಗೇಂದ್ರ, ಎಸ್.ಎ.ರಾಮದಾಸ್ ಸೇರಿದಂತೆ ಹಲವು ಮುಖಂಡರು ಪ್ರಾದೇಶಿಕ ಆಯುಕ್ತರ ಕಚೇರಿಯ ಕೊಠಡಿಯಲ್ಲಿ ನಾಮಪತ್ರ ತುಂಬಿದರು.















