ಮನೆ ಆರೋಗ್ಯ ಸೋಯಾಬೀನ್ ಸೇವಿಸುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನ

ಸೋಯಾಬೀನ್ ಸೇವಿಸುವುದರಿಂದ ಸಾಕಷ್ಟು ಆರೋಗ್ಯ ಪ್ರಯೋಜನ

0

ಸೋಯಾ ಬೀನ್ ಕೂಡ ಒಂದಾಗಿದ್ದು, ಮಕ್ಕಳಿಗೆ-ವೃದ್ಧರಿಗೆ ಎಲ್ಲರಿಗೂ ಸೋಯಾಬಿನ್ ನಿಂದ ಮಾಡುವ ಅಡುಗೆ  ಅಚ್ಚುಮೆಚ್ಚು. ಇದರಲ್ಲಿ ಅನೇಕ ಆರೋಗ್ಯಕರ ಪ್ರಯೋಜನಗಳು ಅಡಗಿವೆ. 

Join Our Whatsapp Group

ಸೋಯಾಬೀನ್ ನಲ್ಲಿ ಐಸೋಫ್ಲೇವಾನ್ಸ್ ಎನ್ನುವ ಜೈವಿಕ ಸಕ್ರಿಯ ಸಂಯುಕ್ತಗಳು ಅಧಿಕ ಪ್ರಮಾಣದಲ್ಲಿದೆ. ಆ ಸಂಯುಕ್ತಗಳು ಮಧುಮೇಹ ಮತ್ತು ಹೃದಯದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತವೆ.

ಸೋಯಾಬೀನ್ ಕೂದಲಿಗೆ ಚಿಕಿತ್ಸಕವಾಗಿ ಕೆಲಸ ಮಾಡುವುದು. ಇದರಲ್ಲಿ ಇರುವಂತಹ ಒಮೆಗಾ-3 ಕೊಬ್ಬಿನಾಮ್ಲವು ಕೂದಲು ಉದುರುವಿಕೆ, ಕೂದಲು ಒಣಗುವುದು ಮತ್ತು ಕೂದಲು ತುಂಡಾಗುವುದನ್ನು ತಡೆಯುವುದು.

ಸೋಯಾದಲ್ಲಿರುವ ಪೆಪ್ಟೈಡ್ ಅಂಶ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿ ರೋಗಗಳ ವಿರುದ್ಧ ಹೋರಾಡುವಂತೆ ಶಕ್ತಿ ನೀಡುತ್ತದೆ. ಇನ್ನಿತರ ಪದಾರ್ಥಗಳಲ್ಲಿ ಲಭ್ಯವಿರದ ವಿಟಮಿನ್ ಮತ್ತು ಖನಿಜಾಂಶಗಳನ್ನೂ ಸೋಯಾ ಸೇವನೆಯಿಂದ ಪಡೆಯಬಹುದು. ಇದು ದೇಹದಲ್ಲಿನ ವಿಷಕಾರಿ ಅಂಶವನ್ನು ಹೋಗಿಸಿ ಶುದ್ದೀಕರಣಗೊಳಿಸುತ್ತದೆ. ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದವರಿಗೂ ಸೋಯಾ ಹೆಚ್ಚು ಪರಿಣಾಮಕಾರಿ

ಸೋಯಾಬೀನ್ ನ ಪೇಸ್ಟ್ ನ್ನು ಹಚ್ಚಿಕೊಂಡರೆ ಆಗ ಇದರಿಂದ ಚರ್ಮಕ್ಕೆ ಮೊಶ್ಚಿರೈಸ್ ಸಿಗುವುದು ಮತ್ತು ಚರ್ಮವು ನಯವಾಗುವುದು. ಚರ್ಮದಲ್ಲಿ ಇರುವಂತಹ ಹೆಚ್ಚುವರಿ ಎಣ್ಣೆಯಂಶವನ್ನು ಹೊರಗೆ ಹಾಕಬೇಕಿದ್ದರೆ ಆಗ ನೀವು ಸೋಯಾಬೀನ್ ಬಳಕೆ ಮಾಡಿ.

ಸೋಯಾದಲ್ಲಿರುವ ಲೆಸಿತಿನ್ ಅಂಶ ಜ್ಞಾಪಕ ಶಕ್ತಿಯನ್ನು ಅಧಿಕಗೊಳಿಸಿ ಏಕಾಗ್ರತೆಯನ್ನೂ ಹೆಚ್ಚಿಸುತ್ತದೆ. ಸೋಯಾ ದೇಹಕ್ಕೆ, ಮೆದುಳಿಗೆ ಎಲ್ಲ ರೀತಿಯಿಂದಲೂ ಅನೇಕ ಪ್ರಯೋಜನವನ್ನು ನೀಡುತ್ತದೆ. ಹಾಗಾಗಿ ಮಿತವಾಗಿ ಸೋಯಾ ಸೇವನೆ ಆರೋಗ್ಯಕ್ಕೆ ಒಳ್ಳೆಯದು.

ಸೋಯಾದಲ್ಲಿ ವಿಶೇಷವಾದ ಐಸೊಫ್ಲೇವಾನ್ಸ್ ಆಂಟಿಯಾಕ್ಸಿಡಂಟ್ ಜೀವಕಣಗಳನ್ನು ಸಂರಕ್ಷಿಸುವುದಲ್ಲದೆ ವಯಸ್ಸಿಗೆ ಮುನ್ನವೇ ಸುಕ್ಕು ಮೂಡುವುದನ್ನು ತಡೆಯುತ್ತದೆ. ಇದು ರಕ್ತದಲ್ಲಿನ ಕೊಲೆಸ್ಟ್ರಾಲನ್ನೂ ಕರಗಿಸುತ್ತದೆ.

ಸೋಯಾಬೀನ್ ನಲ್ಲಿ ನಾರಿನಂಶ ಅಧಿಕವಿರುವುದರಿಂದ ಜೀರ್ಣಕ್ರಿಯೆಗೆ ಸಹಕಾರಿ. ತೂಕ ಇಳಿಕೆಗೆ ಪ್ರಮುಖವಾಗಿ ಜೀರ್ಣಕ್ರಿಯೆ ಚೆನ್ನಾಗಿ ಆಗಬೇಕು. ಕ್ಯಾನ್ಸರ್ ಅಪಾಯವನ್ನು ತಡೆಗಟ್ಟುವಲ್ಲಿ ಈ ರೀತಿಯ ಆರೋಗ್ಯಕರ ಆಹಾರಗಳು ತುಂಬಾ ಸಹಕಾರಿಯಾಗಿವೆ. ಅಗ್ರಿಕಲ್ಚರ್ ಅಂಡ್ ಫುಡ್ ಕೆಮಿಸ್ಟ್ರಿ ಎಂಬ ಜರ್ನಲ್ ಸೋಯಾಬೀನ್ ನಲ್ಲಿ ಜೆನಿಸ್ಟೈನ್ ಆ್ಯಂಟಿಆಕ್ಸಿಡೆಂಟ್ ಅಂಶವಿರುವುದರಿಂದ ಸ್ತನ ಕ್ಯಾನ್ಸರ್ ಬರದಂತೆ ತಡೆಯುತ್ತದೆ ಎಂದು ಹೇಳಿದೆ.