Saval TV on YouTube
ಬೆಂಗಳೂರು(Bengaluru): ವಿಕಲಚೇತನರ ಆರೋಗ್ಯಕ್ಕಾಗಿ 5 ಲಕ್ಷ ರೂ.ವರೆಗೆ ವಿಶೇಷ ಆರೋಗ್ಯ ವಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿಕಲಚೇತನರಿಗೆ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.
ಬಳಿಕ ಮಾತನಾಡಿದ ಅವರು, ವಿಕಲಚೇತನರ ಆರೋಗ್ಯಕ್ಕಾಗಿ 5 ಲಕ್ಷ ರೂ.ವರೆಗೆ ವಿಶೇಷ ಆರೋಗ್ಯ ವಿಮೆ ಘೋಷಣೆ ಮಾಡಿದ್ದೇವೆ. ಸರ್ಕಾರ ನೀಡುವ ಮನೆಗಳಲ್ಲಿ ವಿಶೇಷಚೇತನರಿಗೆ ಶೇ.3 ರಷ್ಟು ಮೀಸಲು ನೀಡಲಾಗುತ್ತದೆ. ಅಂಗವಿಕಲ ಮಕ್ಕಳಿಗೆ ವಿಶೇಷ ತರಬೇತಿ ಕೇಂದ್ರ 2000 ಸೈಕಲ್ ನೀಡಲು ತೀರ್ಮಾನಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಸಚಿವ ಹಾಲಪ್ಪ ಆಚಾರ್ . ಸಂಸದ ಪಿ.ಸಿ ಮೋಹನ್, ಶಾಸಕ ರಿಜ್ವಾನ್ ಅರ್ಷದ್ ಸೇರಿ ಹಲವರು ಉಪಸ್ಥಿತರಿದ್ದರು.