ಮನೆ ಸುದ್ದಿ ಜಾಲ ಡ್ಯಾಡ್ ಸಿನಿಮಾ ಟೀಮ್‌ನಿಂದ ದೀಪಾವಳಿಗೆ ವಿಶೇಷ ಪೋಸ್ಟರ್

ಡ್ಯಾಡ್ ಸಿನಿಮಾ ಟೀಮ್‌ನಿಂದ ದೀಪಾವಳಿಗೆ ವಿಶೇಷ ಪೋಸ್ಟರ್

0

ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್‌ ಅವರು ನಾಯಕರಾಗಿ ನಟಿಸುತ್ತಿರುವ ಬಹುನಿರೀಕ್ಷಿತ ಡ್ಯಾಡ್ ಚಿತ್ರತಂಡದಿಂದ ದೀಪಾವಳಿ ಶುಭ ಸಂದರ್ಭದಲ್ಲಿ ವಿಶೇಷ ಪೋಸ್ಟರ್ ಬಿಡುಗಡೆಯಾಗಿದೆ. ಆ ಮೂಲಕ ಡ್ಯಾಡ್ ಚಿತ್ರತಂಡ ನಾಡಿನ ಜನತೆಗೆ ದೀಪಾವಳಿ ಶುಭಾಶಯ ತಿಳಿಸಿದೆ.

ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರಕ್ಕೆ ಈಗಾಗಲೇ ಎರಡು ಹಂತಗಳ ಚಿತ್ರೀಕರಣ ಮುಕ್ತಾಯವಾಗಿದೆ. ಮೈಸೂರು, ನಂದಿ ಬೆಟ್ಟದಲ್ಲಿ ಚಿತ್ರೀಕರಣ ನಡೆದಿದೆ. ಹರೀಶ್ ಪೆದ್ದಿ ಅವರು ಮೈರಾ ಕ್ರಿಯೇಷನ್ಸ್ ಲಾಂಛನದಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ತೆಲುಗಿನ ಖ್ಯಾತ ನಿರ್ದೇಶಕ ಅನಿಲ್ ಕನ್ನೆಗಂಟಿ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ನಿರ್ಮಾಪಕರಿಗೆ ಹಾಗೂ, ನಿರ್ದೇಶಕರಿಗೆ ಇದು ಕನ್ನಡದಲ್ಲಿ ಮೊದಲ ಚಿತ್ರ. ಬಿ.ಎಸ್. ಸುಧೀಂದ್ರ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಶಿವರಾಜ್‌ಕುಮಾರ್‌ ಅವರು ಅನೇಕ ವರ್ಷಗಳ ನಂತರ ಈ ಚಿತ್ರದಲ್ಲಿ ವೈದ್ಯನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಶರ್ಮಿಳಾ ಮಾಂಡ್ರೆ, ಬೇಬಿ ನಕ್ಷತ್ರ, ಬಾಬು, ಮಲಯಾಳಂ ನಟ ಸೂರಜ್ ವೆಂಜರಮೂಡು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಕನ್ನಡ, ತೆಲುಗು ಮತ್ತು ಮಲಯಾಳಂನಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನ ಹಾಗೂ ಬಿ.ರಾಜಶೇಖರ್ ಅವರ ಛಾಯಾಗ್ರಹಣವಿದೆ.