ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಅವರು ಇಂದು ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದು ಇದಕ್ಕೂ ಮುನ್ನ, ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ, ಅಲ್ಲಿಂದ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ಪಯಣ ಬೆಳೆಸಿದ್ದರು ಎನ್ನಲಾಗಿದೆ.

ನಂತರ ದೇವಸ್ಥಾನಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ವ್ಯವಸ್ಥಾಪನ ಮಂಡಳಿಯ ಪದಾಧಿಕಾರಿಗಳು ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇವರ ದರ್ಶನದ ವೇಳೆ ಭಕ್ತರ ಸಂಚಾರವನ್ನು ನಿಯಂತ್ರಿಸಿ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿತ್ತು.

ಹಾಗೂ ವಿಜಯ್ ಭೇಟಿಯ ಹಿನ್ನೆಲೆಯಲ್ಲಿ ದೇವಸ್ಥಾನದ ಪರಿಸರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಭದ್ರತಾ ದೃಷ್ಟಿಯಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ದೇವಸ್ಥಾನಕ್ಕೆ ಆಗಮಿಸುವ ಮಾರ್ಗಗಳಲ್ಲಿಯೂ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ದೇವಸ್ಥಾನದ ಆವರಣದಲ್ಲಿ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ನೆರೆದಿದ್ದರು. ಸಿಎಂ ವಿಜಯ್ ಅವರನ್ನು ಕಂಡು ಅವರು ಸಂಭ್ರಮಿಸಿದರು ಎನ್ನಲಾಗಿದೆ.















