ಮನೆ ಸುದ್ದಿ ಜಾಲ ಶ್ರೀ ದೇವರ ದಾಸಿಮಯ್ಯ ಜಯಂತಿ

ಶ್ರೀ ದೇವರ ದಾಸಿಮಯ್ಯ ಜಯಂತಿ

0


ಹಾಸನ : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಇಂದು ಹಮ್ಮಿಕೊಂಡಿದ್ದ ಶ್ರೀ ದೇವರ ದಾಸಿಮಯ್ಯ ಜಯಂತಿಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶಾಸಕರಾದ ಸ್ವರೂಪ್ ಪ್ರಕಾಶ್ ಹಾಗೂ ಜಿಲ್ಲಾಧಿಕಾರಿ ಸತ್ಯಭಾಮ ಸಿ ಅವರು ದೇವರ ದಾಸಿಮಯ್ಯ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಮೆರವಣಿಗೆಗೆ ಚಾಲನೆ ನೀಡಿದರು.

ನಂತರ ಮಾತನಾಡಿದ ಶಾಸಕರು ಜಯಂತಿಗೆ ಹೆಚ್ಚು ಮಹಿಳೆಯರು ಬಂದಿರುವುದು ವಿಶೇಷವಾಗಿದೆ, ನೇಕಾರ ಸಮಾಜ ಆರ್ಥಿಕವಾಗಿ, ರಾಜಕೀಯವಾಗಿ ಬೆಳೆಯಲಿ ಎಂದು ಆಶಿಸಿ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಹೆಚ್.ಪಿ ತಾರಾನಾಥ್ ಹಾಗೂ ಸಮುದಾಯದ ಮುಖಂಡರು ಹಾಗೂ ಮತ್ತಿತರರು ಹಾಜರಿದ್ದರು.