ಕೊಲಂಬೊ(Colombo): ಆರ್ಥಿಕ ಸಂಕಷ್ಟದಿಂದ ದೇಶವನ್ನು ಕಾಪಾಡುವಲ್ಲಿ ವಿಫಲವಾದ ಶ್ರೀಲಂಕಾ ಸರ್ಕಾರದ ವಿರುದ್ಧ ದಂಗೆ ಎದ್ದಿರುವ ನಾಗರಿಕರು ಉಗ್ರ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಕುರ್ಚಿಯನ್ನು ಮಿಲಿಟರಿ ಕಾವಲು ಕಾಯುತ್ತಿದೆ.
ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಅವರ ಅಧಿಕೃತ ಅರಮನೆಯನ್ನು ವಶಪಡಿಸಿಕೊಂಡಿರುವ ಪ್ರತಿಭಟನಾಕಾರರು, ರಾಜೀನಾಮೆ ಕೊಡದ ಹೊರತು ಹೊರಗೆ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಈ ಮಧ್ಯೆ, ಜನರ ಆಕ್ರೋಶದ ಕಿಚ್ಚಿಗೆ ಹೆದರಿ ಅಧ್ಯಕ್ಷ ಗೊಟಬಯ ರಾಜಪಕ್ಸ ದೇಶ ಬಿಟ್ಟು ತೆರಳಿದ್ದರೆ. ಪ್ರಭಾರಿ ಅಧ್ಯಕ್ಷ ಮತ್ತು ಪ್ರಧಾನಿ ರಾನಿಲ್ ವಿಕ್ರಮಸಿಂಘೆ ತೀವ್ರ ಪ್ರತಿರೋಧ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಪೀಠಕ್ಕೆ ಭದ್ರತೆ ಒದಗಿಸಲಾಗಿದೆ.
ನಿನ್ನೆ ಪ್ರಭಾರಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ವೇಳೆ, ಸಂಸತ್ ಭವನಕ್ಕೆ ನುಗ್ಗಲು ಯತ್ನಿಸಿದ್ದ ಪ್ರತಿಭಟನಾಕಾರರು ರಾನಿಲ್ ಎರಡೂ ಹುದ್ದೆ ತೊರೆಯಬೇಕೆಂದು ಒತ್ತಾಯಿಸಿದ್ದರು.