Saval TV on YouTube
ಶ್ರೀನಗರ(Srinagar): ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಲಷ್ಕರ್–ಇ–ತೈಯಬಾ (ಎಲ್’ಇಟಿ) ಸಂಘಟನೆಯ ಮೂವರು ಉಗ್ರರನ್ನು ರಕ್ಷಣಾ ಪಡೆಗಳು ಎನ್’ಕೌಂಟರ್’ನಲ್ಲಿ ಹೊಡೆದುರುಳಿಸಿರುವುದಾಗಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಉಗ್ರರು ಅಡಗಿಕೊಂಡಿರುವ ಬಗ್ಗೆ ಲಭ್ಯವಾದ ಖಚಿತ ಮಾಹಿತಿ ಆಧರಿಸಿ, ಶೋಪಿಯಾನ್ ಜಿಲ್ಲೆಯ ಝೈನಪೊರಾ ಪ್ರದೇಶದಲ್ಲಿರುವ ಮುಂಜ್ ಮಾರ್ಗ್’ನಲ್ಲಿ ರಕ್ಷಣಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದವು. ಬಳಿಕ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಉಗ್ರ ಸಂಘಟನೆ ಎಲ್’ಇಟಿಗೆ ಸೇರಿದ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಹತ್ಯೆಯಾದವರ ಗುರುತು ಪತ್ತೆ ಮಾಡಲಾಗುತ್ತಿದೆ. ಹೆಚ್ಚಿನ ಮಾಹಿತಿ ನೀಡಲಾಗುವುದು ಎಂದು ‘ಕಾಶ್ಮೀರ ವಲಯ ಪೊಲೀಸ್’ ಟ್ವೀಟ್ ಮಾಡಿದೆ.