ಶ್ರೀನಗರ(Srinagar): ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತನೊಬ್ಬನನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ಮಾಹಿತಿ ನೀಡಿದ್ದಾರೆ.
ದಕ್ಷಿಣ ಕಾಶ್ಮೀರದ ಚೌಧರಿ ಗುಂಡ್ ಪ್ರದೇಶದ ನಿವಾಸಿ ಪೂರನ್ ಕೃಷನ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.
ಬಳಿಕ ಆಸ್ಪತ್ರೆಗೆ ಸಾಗಿಸಿದರೂ ಪ್ರಾಣ ಉಳಿಸಲು ಸಾಧ್ಯವಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.
ಪ್ರದೇಶವನ್ನು ಸುತ್ತುವರಿದಿರುವ ಭದ್ರತಾ ಪಡೆ, ಉಗ್ರರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ.