ಮನೆ ರಾಜ್ಯ ಇಂದಿನಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 : ವಿದ್ಯಾರ್ಥಿಗಳಿಗೆ ಕಡ್ಡಾಯ ನಿಯಮಗಳು ಪ್ರಕಟ

ಇಂದಿನಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 : ವಿದ್ಯಾರ್ಥಿಗಳಿಗೆ ಕಡ್ಡಾಯ ನಿಯಮಗಳು ಪ್ರಕಟ

0

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಆಯೋಜಿಸಲಾಗಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಇಂದು (ಮೇ 26) ರಿಂದ ರಾಜ್ಯದಾದ್ಯಂತ ಆರಂಭವಾಗಿದೆ. ವಿದ್ಯಾರ್ಥಿಗಳು ಪರೀಕ್ಷೆ ಪ್ರಕ್ರಿಯೆಯಲ್ಲಿ ಪಾಲಿಸಬೇಕಾದ ಹಲವು ಕಡ್ಡಾಯ ನಿಯಮಗಳನ್ನು ಮಂಡಳಿ ಪ್ರಕಟಿಸಿದ್ದು, ಈ ನಿಯಮಗಳ ಉಲ್ಲಂಘನೆಗೆ ಕ್ರಮ ಕೈಗೊಳ್ಳಲಾಗುತ್ತದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಮೇ 26 ರಿಂದ ಜೂನ್ 2ರವರೆಗೆ ರಾಜ್ಯದಾದ್ಯಂತ ನಡೆಯಲಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದು ಕಡ್ಡಾಯವಾಗಿದ್ದು, ಪರೀಕ್ಷೆಯ ಸಮಯದಲ್ಲಿ ಅವು ನಿರಂತರವಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಈ ವೀಕ್ಷಣೆಯನ್ನು ಜಿಲ್ಲಾ ಪಂಚಾಯತ್ ಸಿಇಓ ಕಚೇರಿಯಿಂದ ನೇರವಾಗಿ ಮಾನಿಟರ್ ಮಾಡಲಾಗುತ್ತದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಮತ್ತು ಅಕ್ರಮಗಳನ್ನು ತಡೆಯುವ ಉದ್ದೇಶ ಇದಾಗಿದೆ.

ವಿದ್ಯಾರ್ಥಿಗಳಿಗೆ ಈ ನಿಯಮಗಳು ಕಡ್ಡಾಯ:

  • ವಿದ್ಯಾರ್ಥಿಗಳು ಸರಳ ಕ್ಯಾಲ್ಕುಲೇಟರ್ ಬಳಸಬಹುದು.
  • ಮಾತ್ರ ಸ್ಟಾಟಿಸ್ಟಿಕ್ಸ್ ವಿಷಯಕ್ಕೆ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅವಕಾಶ.
  • ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರಪತ್ರಿಕೆ ಮತ್ತು ಪ್ರಶ್ನೆಪತ್ರಿಕೆಗಳನ್ನು ಕಡ್ಡಾಯವಾಗಿ ವಾಪಸ್ ಪಡೆಯಲಾಗುತ್ತದೆ.
  • ಹಾಲ್ ಟಿಕೆಟ್ ಮತ್ತು ಗುರುತಿನ ಚೀಟಿ ಕಡ್ಡಾಯ.
  • ಮೊಬೈಲ್ ಫೋನ್, ಎಲೆಕ್ಟ್ರಾನಿಕ್ ಉಪಕರಣಗಳ ಬಳಕೆ ಸಂಪೂರ್ಣ ನಿಷೇಧ.
  • ಪರೀಕ್ಷಾ ಅವಧಿಗೆ ಮುಂಚೆ ಹೊರ ಹೋಗುವವರಿಗೆ ಪ್ರಶ್ನೆಪತ್ರಿಕೆ ನೀಡಲಾಗುವುದಿಲ್ಲ.
  • ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ಎಸ್‌ಟಿಡಿ, ಮೊಬೈಲ್ ಪೇಜರ್, ಝೆರಾಕ್ಸ್, ಟೈಪಿಂಗ್ ಹತ್ತುಮುಂದಾದ ವ್ಯವಹಾರಗಳಿಗೆ ನಿಷೇಧ.