ಮನೆ ಶಿಕ್ಷಣ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೨: ವಿದ್ಯಾರ್ಥಿಗಳಿಗೆ ಉಚಿತ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-೨: ವಿದ್ಯಾರ್ಥಿಗಳಿಗೆ ಉಚಿತ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ

0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-೨ರ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.

Join Our Whatsapp Group

ಜೂನ್ ೧೪ರಿಂದ ೨೨ರವರೆಗೆ ಪರೀಕ್ಷೆ ನಡೆಯಲಿದ್ದು, ಆ ದಿನಗಳಂದು ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ತೆರಳುವ ಮತ್ತು ಅಲ್ಲಿಂದ ಹಿಂದಿರುಗುವ ವೇಳೆ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರಗಳನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಕೆಎಸ್‌ಆರ್‌ಟಿಸಿಯ ನಗರ, ಹೊರವಲಯ, ಸಾಮಾನ್ಯ ಮತ್ತು ವೇಗದೂತ ಬಸ್‌ಗಳಲ್ಲಿ ಈ ಅವಕಾಶ ನೀಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದಿನ ಲೇಖನಶಿವಮೊಗ್ಗ: ಗಾಂಜಾ ಮತ್ತಿನಲ್ಲಿ ಕಾರು, ಬೈಕು, ರಿಕ್ಷಾಗಳ ಗಾಜು ಪುಡಿ ಪುಡಿಮಾಡಿದ ದುಷ್ಕರ್ಮಿಗಳು
ಮುಂದಿನ ಲೇಖನಶಿವನಿಗೆ ನಮ್ಮ ರಕ್ಷಣೆಯ ಅಗತ್ಯವಿಲ್ಲ: ಅಕ್ರಮ ಮಂದಿರ ಕೆಡವಲು ದೆಹಲಿ ಹೈಕೋರ್ಟ್ ಅನುಮತಿ