ಮನೆ ಸುದ್ದಿ ಜಾಲ ಎಸ್ ಎಸ್ ಎಲ್ ಸಿ ಪರೀಕ್ಷೆಯ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆ ?

ಎಸ್ ಎಸ್ ಎಲ್ ಸಿ ಪರೀಕ್ಷೆಯ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆ ?

0

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಹಣಬರಹಟ್ಟಿಯ ಸರ್ಕಾರಿ ಪ್ರೌಢಶಾಲೆ ಕೇಂದ್ರದಿಂದ  ಎಸ್ ಎಸ್ ಎಲ್ ಸಿ ಪರೀಕ್ಷೆಯ ಗಣಿತ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಅನುಮಾನ ವ್ಯಕ್ತವಾಗಿದ್ದು, ಸೋರಿಕೆಯಾದ ಪ್ರಶ್ನೆಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ, ಬೈಲಹೊಂಗಲ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎನ್.ಪ್ಯಾಟಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಶಿಕ್ಷಕರಿಂದ ಮಾಹಿತಿ ಕಲೆಹಾಕಿದರು.

ಈ ಕೇಂದ್ರದಲ್ಲಿ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ಗಣಿತ ವಿಷಯದ ಪರೀಕ್ಷೆ ನಡೆಯಿತು. ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 191 ವಿದ್ಯಾರ್ಥಿಗಳ ಪೈಕಿ 175 ವಿದ್ಯಾರ್ಥಿಗಳು ಹಾಜರಾಗಿದ್ದರು.

ಪರೀಕ್ಷೆ ನಡೆಯುತ್ತಿರುವಾಗಲೇ ಈ ಕೇಂದ್ರದಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಶಿಕ್ಷಕರೇ ಇದಕ್ಕೆ ಸಹಕರಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಹಣಬರಹಟ್ಟಿ ಕೇಂದ್ರಕ್ಕೆ ಭೇಟಿ ನೀಡಿ, ಎಲ್ಲ ಆಯಾಮಗಳಿಂದ ಪರಿಶೀಲಿಸಿದ್ದೇನೆ. ಆದರೆ, ಇದೇ ಕೇಂದ್ರದಿಂದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು ದೃಢಪಟ್ಟಿಲ್ಲ ಎಂದು ಎಂ.ಎನ್.ಪ್ಯಾಟಿ ತಿಳಿಸಿದರು‌.

ಹಿಂದಿನ ಲೇಖನಬುಧವಾರದೊಳಗೆ ಅಭ್ಯರ್ಥಿಗಳ ಹೆಸರು ಶಿಫಾರಸ್ಸು ಪ್ರಕ್ರಿಯೆ ಪೂರ್ಣ: ಪ್ರಹ್ಲಾದ ಜೋಶಿ
ಮುಂದಿನ ಲೇಖನಹಾಸನ ಕ್ಷೇತ್ರದ ಟಿಕೆಟ್ ದೇವೇಗೌಡರು ಫೈನಲ್ ಮಾಡಲಿದ್ದಾರೆ: ಹೆಚ್.ಡಿ ಕುಮಾರಸ್ವಾಮಿ