ಮನೆ ಸುದ್ದಿ ಜಾಲ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: 7.38 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣ

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: 7.38 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣ

0

ಬೆಂಗಳೂರು(Bengaluru): 2021–22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಶೇ 85.63ರಷ್ಟು ಫಲಿತಾಂಶ ಬಂದಿದೆ. 7.38 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ವಾಡಿಕೆಯಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಶೇಕಡಾ 90.29ರಷ್ಟು ಹೆಣ್ಣುಮಕ್ಕಳು ಉತ್ತೀರ್ಣರಾಗಿದ್ದಾರೆ.8,20,900 ವಿದ್ಯಾರ್ಥಿಗಳು ಈ ವರ್ಷ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ನಗರಕ್ಕಿಂತ ಗ್ರಾಮೀಣ ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ.ಎಂದಿನಂತೆ ಗ್ರಾಮೀಣ ವಿದ್ಯಾರ್ಥಿಗಳೇ ಉತ್ತಮ ಸಾಧನೆ ಮಾಡಿದ್ದಾರೆ. ನಗರ ಭಾಗದಲ್ಲಿ ಶೇ.86.64 ಫಲಿತಾಂಶ ದಾಖಲಾದರೆ ಗ್ರಾಮೀಣ ಭಾಗದಲ್ಲಿ ಶೇ.91.32 ರಷ್ಟು ಫಲಿತಾಂಶ ಪ್ರಕಟವಾಗಿದೆ.

ಶೇ. 81.03 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ ಶೇ.90.29 ವಿದ್ಯಾರ್ಥಿನಿಯರು ಪಾಸ್‌ ಆಗಿದ್ದಾರೆ. 145 ವಿದ್ಯಾರ್ಥಿಗಳು 625 ಅಂಕ ಪಡೆದಿರುವುದು ವಿಶೇಷ.625ಕ್ಕೆ 625 ಅಂಕಗಳನ್ನು 125 ಮಕ್ಕಳು ಗಳಿಸಿದ್ದಾರೆ. ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚು ಫಲಿತಾಂಶ ವಿದ್ಯಾರ್ಥಿಗಳಿಗೆ ಸಿಕ್ಕಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.

20 ಶಾಲೆಗಳು ಶೂನ್ಯ ಸಂಪಾದನೆ ಮಾಡಿದರೆ 3,920 ಶಾಲೆಗಳು ಶೇ.100 ರಷ್ಟು ಫಲಿತಾಂಶ ದಾಖಲಿಸಿದೆ. ರ‍್ಯಾಂಕ್‌ ಪದ್ದತಿ ಕೈ ಬಿಟ್ಟ ಇಲಾಖೆ ಈ ಬಾರಿ ಗ್ರೇಡ್ ವ್ಯವಸ್ಥೆಯಲ್ಲಿ ಫಲಿತಾಂಶ ಘೋಷಣೆ ಮಾಡಿದೆ. ಬೆಂಗಳೂರು ದಕ್ಷಿಣ ಮತ್ತು ಯಾದಗಿರಿ ಜಿಲ್ಲೆಗೆ ಬಿ ಗ್ರೇಡ್ ಸಿಕ್ಕಿದರೆ ಉಳಿದ ಎಲ್ಲಾ ಜಿಲ್ಲೆಗಳಿಗೆ ಎ ಗ್ರೇಡ್ ಸಿಕ್ಕಿದೆ.

ರಾಜ್ಯದ ಒಟ್ಟು 15,387 ಶಾಲೆಗಳ 8,53,436 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು 8,73,884 ವಿಧ್ಯಾರ್ಥಿಗಳಲ್ಲಿ    7,30,881  ಲಕ್ಷ ವಿಧ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.  3,72,279 ಲಕ್ಷ ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದು, 3,58,602 ಲಕ್ಷ ಗಂಡು ಮಕ್ಕಳು ಉತ್ತೀರ್ಣರಾಗಿದ್ದಾರೆ. 40,061 ಮಕ್ಕಳು ಗ್ರೇಸ್ ಮಾರ್ಕ್ಸ್ ಪಡೆದು ಪಾಸ್ ಆಗಿದ್ದಾರೆ.

ಪೂರಕ ಪರೀಕ್ಷೆ: ಜೂನ್ 27 ರಿಂದ ಜುಲೈ 4 ವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಉತ್ತರ ಪತ್ರಿಕೆ ಸ್ಕ್ಯಾನಿಂಗ್ ಪ್ರತಿ ಪಡೆಯಲು ಮೇ 30ರವರೆಗೆ ಅವಕಾಶವಿದೆ. ಮರು ಎಣಿಕೆ, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು  ಜೂನ್ 6 ಕೊನೆಯ ದಿನಾಂಕವಾಗಿದೆ.

ಮಾರ್ಚ್ 28 ರಿಂದ ಏಪ್ರಿಲ್ 11ರ ವರಗೆ 2022ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ನಡೆದಿತ್ತು. ಈ ಬಾರಿ ಮುಖ್ಯ ಪರೀಕ್ಷೆಗೆ 15,387 ಶಾಲೆಗಳಿಂದ 8,73,884 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿ ವಿದ್ಯಾರ್ಥಿಗಳು. ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.