ಹಾಸನ: ಮಾರ್ಚ್ 28 ರಿಂದ ರಾಜ್ಯಾದ್ಯಂತ ಆರಂಭವಾಗಲಿರುವ ಎಸ್.ಎಸ್.ಎಲ್.ಸಿ.ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅಬಕಾರಿ ಮತ್ತು ಹಾಸನ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಶುಭ ಹಾರೈಸಿದ್ದಾರೆ.
ಶ್ರವಣಬೆಳಗೊಳದ ಬಾಹುಬಲಿ ಪ್ರಾಕೃತ ವಿದ್ಯಾಪೀಠದಲ್ಲಿ ನಡೆದ ಕಟ್ಟಡಗಳನ್ನು ಶ್ರೀಪೀಠಕ್ಕೆ ಹಸ್ತಾಂತರ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದ ಮಹತ್ತರ ಘಟ್ಟವಾದ ಎಸ್.ಎಸ್.ಎಲ್.ಸಿ ಪರೀಕ್ಷೆ ಹಾಸನ, ಮಂಡ್ಯ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎಲ್ಲ ಕಡೆ ಆರಂಭವಾಗಲಿದ್ದು, ಎಲ್ಲ ವಿದ್ಯಾರ್ಥಿಗಳು ಯಾವುದೇ ಆತಂಕಕ್ಕೆ ಒಳಗಾಗದೆ ಉತ್ತಮವಾಗಿ ಪರೀಕ್ಷೆ ಬರೆಯುವಂತೆ ಶುಭ ಹಾರೈಸಿದರು.
ಪ್ರಾಕೃತ ವಿವಿ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ಅವರನ್ನು ಆಹ್ವಾನಿಸುವ ಕುರಿತು ಪತ್ರ ವ್ಯವಹಾರ ನಡೆಯುತ್ತಿದೆ. ಸಧ್ಯದಲ್ಲಿಯೆ ದಿನಾಂಕ ನಿಗದಿಯಾಗವ ನಿರೀಕ್ಣೆ ಇದೆ ಎಂದರು.
ಹಿಜಾಬ್ ವಿಚಾರದಲ್ಲಿ ರಾಜ್ಯ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಗಳನ್ನು ಗೌರವಿಸುವುದು ಎಲ್ಲ ಕರ್ತವ್ಯವಾಗಿದೆ ಎಂದು ಸುದ್ದಿಗಾರರ ಪ್ರಶ್ನೆಗೆ ಸಚಿವರು ಉತ್ತರಿಸಿದರು.