ಮನೆ ಅಪರಾಧ ಎಸ್.ಎಸ್.ಎಲ್.ಸಿ. ಪರೀಕ್ಷೆ: ನಿರೀಕ್ಷಿಸಿದಷ್ಟು ಅಂಕ ಬರಲಿಲ್ಲವೆಂದು ವಿದ್ಯಾರ್ಥಿನಿ ಆತ್ಮಹತ್ಯೆ

ಎಸ್.ಎಸ್.ಎಲ್.ಸಿ. ಪರೀಕ್ಷೆ: ನಿರೀಕ್ಷಿಸಿದಷ್ಟು ಅಂಕ ಬರಲಿಲ್ಲವೆಂದು ವಿದ್ಯಾರ್ಥಿನಿ ಆತ್ಮಹತ್ಯೆ

0

ಮೈಸೂರು (Mysuru)-ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ನಿರೀಕ್ಷಿಸಿದಷ್ಟು ಅಂಕ ಬರಲಿಲ್ಲವೆಂದು ವಿದ್ಯಾರ್ಥಿನಿಯೊಬ್ಬಳು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ದೀಪಿಕಾ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಪಿರಿಯಾಪಟ್ಟಣ ತಾಲೂಕಿನ ಬೇಗೂರಿನಲ್ಲಿ ಘಟನೆ ನಡೆದಿದೆ.
ಈ ಬಾರಿ ಎಸ್.ಎಸ್.ಎಲ್.ಸಿ.ಪರೀಕ್ಷೆ ಫಲಿತಾಂಶದಲ್ಲಿ ದೀಪಿಕಾ 625 ಕ್ಕೆ 509 ಅಂಕ ಪಡೆದಿದ್ದಾಳೆ. 580 ಕ್ಕೂ ಹೆಚ್ಚು ಅಂಕ ಪಡೆಯುವ ನಿರೀಕ್ಷೆಯಲ್ಲಿದ್ದ ದೀಪಿಕಾ ಗೆ ನಿರಾಸೆಯಾಗಿದ್ದಾಳೆ.
ಇದರಿಂದ ಬೇಸತ್ತ ದೀಪಿಕಾ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಸ್ನೇಹಿತರೊಂದಿಗೆ ಈಜಲು ಹೋಗಿ ವಿದ್ಯಾರ್ಥಿ ಸಾವು
ಮುಂದಿನ ಲೇಖನರಾಜ್ಯದಲ್ಲಿ 196 ಮಂದಿಗೆ ಕೋವಿಡ್ ಪಾಸಿಟಿವ್