ಬೆಂಗಳೂರು: ಪ್ರಸಕ್ತ ಸಾಲಿನ ಎಸ್‌ಎಸ್ ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್‌ಸೈಟ್ https://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದು.
ಈ ಬಾರಿಯ ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಜಿಲ್ಲೆ ಮೊದಲ ಸ್ಥಾನ ಪಡೆದಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆಯಲ್ಲಿ 94% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಈ ಬಾರಿಯ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 631204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. 73.40 ರಷ್ಟು ಫಲಿತಾಂಶ ದಾಖಲಾಗಿದೆ.
ಈ ಬಾರಿಯ ಪರೀಕ್ಷೆಯನ್ನು ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಸಲಾಗಿದ್ದು, ಹೀಗಾಗಿ ಶೇಕಡಾ 30ರಷ್ಟು ಫಲಿತಾಂಶ ಕಡಿಮೆಯಾಗಿದೆ. ಹೀಗಾಗಿ ಕೃಪಾಂಕದ ಪ್ರಮಾಣವನ್ನು 10ರಿಂದ 20%ಗೆ ಹೆಚ್ಚಿಸಲಾಗಿದೆ.
ಮಾ.25ರಿಂದ ಏ.6ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಿತ್ತು. ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಮಂಡಳಿ ಅಧ್ಯಕ್ಷರು ತಿಳಿಸಿದ್ದಾರೆ.