ಮನೆ ಶಿಕ್ಷಣ ಮೇ.9 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ

ಮೇ.9 ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ

0

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ನಾಳೆ ಗುರುವಾರ (ಮೇ.9) ರಂದು ಪ್ರಕಟಗೊಳ್ಳಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Join Our Whatsapp Group

ಮೇ.9ರ ಬೆಳಗ್ಗೆ 10.30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ ನಡೆಸಲಿದೆ. ಬಳಿಕ karresults.nic.in ವೆಬ್‌ಸೈಟ್‌ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ಮಾ. 25 ರಿಂದ ಏ.6ರ ವರೆಗೆ ಎಸ್.ಎಸ್.ಎಲ್.‌ಸಿ. ಪರೀಕ್ಷೆ ನಡೆದಿತ್ತು. ಈ ಬಾರಿ ಎಸ್ ಎಸ್ ಎಲ್ಸಿ ಪರೀಕ್ಷೆಗೆ 8.69 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 4,41,910 ವಿದ್ಯಾರ್ಥಿ ಮತ್ತು 4,28,058 ವಿದ್ಯಾರ್ಥಿನಿಯರು ಇದ್ದರು.

ಹಿಂದಿನ ಲೇಖನಕ್ಯಾಬಿನ್ ಸಿಬ್ಬಂದಿ ಪ್ರತಿಭಟನೆ: ಏರ್ ಇಂಡಿಯಾ ಎಕ್ಸ್‌ ಪ್ರೆಸ್ ವಿಮಾನಗಳ ಹಾರಾಟ ರದ್ದು
ಮುಂದಿನ ಲೇಖನಪ್ರಚಾರ ಕಾರ್ಯಕ್ಕಾಗಿ ಕೇಜ್ರಿವಾಲ್‌ ಗೆ ಮಧ್ಯಂತರ ಜಾಮೀನು: ಆದ್ಯತೆ ಮೇಲೆ ಪರಿಗಣಿಸಲಾಗುವುದು ಎಂದ ಸುಪ್ರೀಂ ಕೋರ್ಟ್