ಮನೆ ರಾಜ್ಯ SSLC ರಿಸಲ್ಟ್ ಕೌಂಟ್‌ಡೌನ್ ಶುರು – ದಿನಾಂಕ ಘೋಷಣೆಗೆ ಕ್ಷಣಗಣನೆ..!

SSLC ರಿಸಲ್ಟ್ ಕೌಂಟ್‌ಡೌನ್ ಶುರು – ದಿನಾಂಕ ಘೋಷಣೆಗೆ ಕ್ಷಣಗಣನೆ..!

0

ಕರ್ನಾಟಕದ 10ನೇ ತರಗತಿ ವಿದ್ಯಾರ್ಥಿಗಳ ಫಲತಾಂಶ ಕಾಯುವಿಕೆ ಶೀಘ್ರದಲ್ಲೇ ಅಂತ್ಯಗೊಳ್ಳಲಿದೆ. ನಾಳೆ ಅಥವಾ ನಾಡಿದ್ದು (ಏ.23, 24) ಫಲಿತಾಂಶ ಬರಲಿದೆ ಎಂದು ಹೇಳಲಾಗುತ್ತಿದೆ. ಇನ್ನು ಕೆಲವೊಂದು ಮೂಲಗಳ ಪ್ರಕಾರ ಮೇ ತಿಂಗಳ ಆರಂಭದಲ್ಲಿ ಫಲಿತಾಂಶ ಹೊರಬೀಳುವ ನಿರೀಕ್ಷೆಯಿದ್ದು, ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿ ಅಧಿಕೃತ ವೆಬ್‌ಸೈಟ್‌ನಲ್ಲಿ ಅಂಕಪಟ್ಟಿಯನ್ನು ಪಡೆಯಬಹುದು ಎಂದು ಹೇಳಲಾಗಿದೆ. ಈ ಬಗ್ಗೆ ಗೊಂದಲು ಮಾಡಿಕೊಳ್ಳುವುದು ಬೇಡ, ಫಲಿತಾಂಶ ಈ ವಾರದಲ್ಲಿ ಅಥವಾ ಮುಂದಿನ ತಿಂಗಳು ಬಂದರು ಎಲ್ಲದಕ್ಕೂ ಸಿದ್ಧರಾಗಿರುವುದು ಒಳ್ಳೆಯದು.

ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ ಯಾವಾಗ? – ಕಳೆದ ಎರಡು ವರ್ಷಗಳ (2024 ಮತ್ತು 2025) ಅಂಕಿಅಂಶಗಳನ್ನು ಗಮನಿಸಿದರೆ, ಫಲಿತಾಂಶವು ಮೇ 9ರ ಸುಮಾರಿಗೆ ಪ್ರಕಟವಾಗಿತ್ತು. ಈ ವರ್ಷವೂ ಮಂಡಳಿಯು ಅದೇ ಸಮಯದಲ್ಲಿ ಅಥವಾ ಮೇ ಮೊದಲ ವಾರದಲ್ಲಿ ಫಲಿತಾಂಶ ಘೋಷಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಆದರೆ ಈ ಹಿಂದೆ ಏಪ್ರಿಲ್ 23 ಅಥವಾ 24ಕ್ಕೆ ಫಲಿತಾಂಶ ಪ್ರಕಟ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಈ ಬಗ್ಗೆ ಇನ್ನು ಸ್ಪಷ್ಟ ಮಾಹಿತಿ ಬಂದಿಲ್ಲ ಹಾಗೂ ಇಲಾಖೆ ಕೂಡ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ.

ವಿದ್ಯಾರ್ಥಿಗಳು ಈ ಕೆಳಗಿನ ಅಧಿಕೃತ ಲಿಂಕ್‌ಗಳ ಮೂಲಕ ಫಲಿತಾಂಶ ಚೆಕ್ ಮಾಡಬಹುದು:
karresults.nic.in ಮತ್ತು kseab.karnataka.gov.in
ಎಸ್​ಎಸ್​ಎಲ್​ಸಿ ಫಲಿತಾಂಶದ ಅಂಕಪಟ್ಟಿ ಡೌನ್‌ಲೋಡ್ ಮಾಡುವುದು ಹೇಗೆ?
ಹಂತ 1: ಮೊದಲು ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ.
ಹಂತ 2: ಮುಖಪುಟದಲ್ಲಿ ಕಾಣುವ ‘SSLC Result 2026’ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ 3: ನಿಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು (Date of Birth) ನಮೂದಿಸಿ.
ಹಂತ 4: ‘Submit’ ಬಟನ್ ಮೇಲೆ ಕ್ಲಿಕ್ ಮಾಡಿ.
ಹಂತ 5: ನಿಮ್ಮ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಪರದೆಯ ಮೇಲೆ ಕಾಣಿಸುತ್ತದೆ. ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.