ಮನೆ ಸುದ್ದಿ ಜಾಲ ಮೇ 19 ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ

ಮೇ 19 ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ

0

ಬೆಂಗಳೂರು(Bengaluru): ಮೇ 19ರಂದು ಎಸ್‌ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ  ಬಿ.ಸಿ. ನಾಗೇಶ್  ಹೇಳಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೇ 15 ರಂದು ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಈ ಹಿಂದೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿತ್ತು. ಆದರೆ ಸಾಲು ಸಾಲು ರಜೆಗಳು ಬಂದ ಕಾರಣ, ಮೌಲ್ಯಮಾಪನ ಕೊಂಚ ವಿಳಂಭವಾಗಿತ್ತು. ಈಗ ಮೌಲ್ಯ ಮಾಪನ ಪ್ರಕ್ರಿಯೆ ಮುಗಿದಿದ್ದು, ಮೌಲ್ಯ ಮಾಪನದಲ್ಲಿ ಸಣ್ಣಪುಟ್ಟ ಕೆಲವು ದೋಷಗಳಿದ್ದಲ್ಲಿ ಅವುಗಳನ್ನು ಸರಿಪಡಿಸುವ ಕಾರ್ಯ ನಡೆಸಲಾಗುತ್ತಿದೆ. ಮೌಲ್ಯಮಾಪನ ಕಾರ್ಯ ಪೂರ್ಣಗೊಂಡ ನಂತರ ಅಂಕಗಳ ದಾಖಲೀಕರಣ ಪೂರ್ಣಗೊಳಿಸಿ ಮೇ 19 ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಮಾರ್ಚ್‌ 28 ರಿಂದ ಏಪ್ರಿಲ್‌ 11 ರವರಗೆ 2022 ನೇ ಸಾಲಿನ ಎಸ್‌ಎಸ್‌ಎಲ್ಸಿ ವಾರ್ಷಿಕ ಪರೀಕ್ಷೆ ನಡೆದಿತ್ತು. ಈ ಬಾರಿ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗೆ 15,387 ಶಾಲೆಗಳಿಂದ 8,73,884 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು ಮತ್ತು 4 ತೃತೀಯ ಲಿಂಗಿ ವಿದ್ಯಾರ್ಥಿಗಳು. ಅಲ್ಲದೆ ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.