ಮನೆ ಸುದ್ದಿ ಜಾಲ ಇದೇ ತಿಂಗಳ ಮೂರನೇ ವಾರದಲ್ಲಿ SSLC ಫಲಿತಾಂಶ ಪ್ರಕಟ: ಸಚಿವ ನಾಗೇಶ್

ಇದೇ ತಿಂಗಳ ಮೂರನೇ ವಾರದಲ್ಲಿ SSLC ಫಲಿತಾಂಶ ಪ್ರಕಟ: ಸಚಿವ ನಾಗೇಶ್

0

ಬೆಂಗಳೂರು(Bengaluru): ಇದೇ ತಿಂಗಳ ಮೂರನೇ ವಾರದಲ್ಲಿ ಎಸ್​ಎಸ್​​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮಾಹಿತಿ ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಾಗಲೇ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಗಿದಿದೆ. ಫಲಿತಾಂಶದ ತಯಾರಿಯ ಕೊನೆಯ ಘಟ್ಟದಲ್ಲಿ ಕೆಲಸ ನಡೆಯುತ್ತಿದೆ. ಮೂರನೇ ವಾರ ಪಲಿತಾಂಶ ಲಭ್ಯವಾಗಲಿದೆ ಎಂದು ತಿಳಿಸಿದರು.

ಮಾರ್ಚ್​​ 28ರಿಂದ ರಾಜ್ಯಾದ್ಯಂತ ಪರೀಕ್ಷೆ ಆರಂಭವಾಗಿತ್ತು. ಈ ಬಾರಿ 8,73,846 ವಿದ್ಯಾರ್ಥಿಗಳು ಎಸ್​ಎಸ್​​ಎಲ್​ಸಿ ಪರೀಕ್ಷೆ ಬರೆದಿದ್ದಾರೆ. ರಾಜ್ಯದ 15,387 ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, 45,289 ಪರೀಕ್ಷಾ ಕೊಠಡಿಗಳ ಸಿದ್ಧತೆ ಮಾಡಲಾಗಿತ್ತು. ಅತ್ಯಂತ ಸುಗಮವಾಗಿ ಈ ಬಾರಿ ಪರೀಕ್ಷೆಯನ್ನು ನಡೆಸಲಾಗಿದೆ. ಎಲ್ಲಿಯೂ ಯಾವುದೇ ರೀತಿಯ ಸಮಸ್ಯೆ ಎದುರಾಗಿಲ್ಲ. ಕೋವಿಡ್ ನಿಯಮಾವಳಿಗಳನ್ನು ಪಾಲಿಸುವ ಮೂಲಕ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದರು.

ಹಿಂದಿನ ಲೇಖನರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ದುರ್ಮರಣ
ಮುಂದಿನ ಲೇಖನಮೈಸೂರು ಮೃಗಾಲಯದಲ್ಲಿ  3 ಮರಿಗೆ ಜನ್ಮ ನೀಡಿದ ಬಿಳಿ ಹುಲಿ