ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಶನಿವಾರ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜೂನ್ 14ರಿಂದ 22ರವರೆಗೆ ಪರೀಕ್ಷೆ ನಡೆಯಲಿದೆ.
ಜೂನ್ 7 ರಿಂದ ನಡೆಯಬೇಕಿದ್ದ ಎಸ್‌ಎಸ್‌ಎಲ್ ಸಿ ಪೂರಕ ಪರೀಕ್ಷೆಯನ್ನು ಇತ್ತೀಚೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದೂಡಿತ್ತು.
ಇದೀಗ ಪರಿಷ್ಕೃತ ವೇಳಾಪಟ್ಟಿಯನ್ನು ಇಂದು ಮಂಡಳಿಯ ಜಾಲತಾಣ https://kseab.karnataka.gov.in/english ಪ್ರಕಟಿಸಲಾಗಿದೆ.
ವೇಳಾಪಟ್ಟಿ ಹೀಗಿದೆ
ಜೂನ್ 14: ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ
ಜೂನ್ 15: ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್, ಪರ್ಷಿಯನ್, ಅರೇಬಿಕ್, ಸಂಸ್ಕೃತ, ಕೊಂಕಣಿ, ಉರ್ದು, ತುಳು, ಮತ್ತು NSQF ವಿಷಯಗಳು
ಜೂನ್ 18: ಗಣಿತ/ಸಮಾಜ ಶಾಸ್ತ್ರ
ಜೂನ್ 19: ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್ IV, ಇಂಜಿನಿಯರಿಂಗ್ ಗ್ರಾಫಿಕ್ಸ್2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ‘ಸಿ’ ನಲ್ಲಿ ಪ್ರೋಗ್ರಾಮಿಂಗ್, ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ
ಜೂನ್ 20: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ
ಜೂನ್ 21: ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ
ಜೂನ್ 22: ಸಮಾಜ ವಿಜ್ಞಾನ
ಕಳೆದ ಮೇ 9 ರಂದು 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ ಕಂಡಿದೆ.