ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ (KSEAB) ಎಸ್ ಎಸ್ ಎಲ್ ಸಿ ಪೂರಕ ಫಲಿತಾಂಶ 2023 ಅನ್ನು ಇಂದು ಬೆಳಿಗ್ಗೆ 11 ಗಂಟೆಗೆ ಬಿಡುಗಡೆ ಮಾಡಲಿದೆ.
ಬಿಡುಗಡೆಯಾದ ನಂತರ, ಕರ್ನಾಟಕ ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಕಾಣಿಸಿಕೊಂಡ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್ ಸೈಟ್ karresults.nic.in ನಲ್ಲಿ ಪರಿಶೀಲಿಸಬಹುದು.
ಕರ್ನಾಟಕ ಎಸ್ ಎಸ್ ಎಲ್ ಸಿ ಅಥವಾ 10 ನೇ ತರಗತಿ ಫಲಿತಾಂಶ 2023 ಅನ್ನು ಮೇ 08 ರಂದು ಘೋಷಿಸಲಾಗಿತ್ತು. ಇನ್ನು ಈ ಬೋರ್ಡ್ ಪರೀಕ್ಷೆಗಳಲ್ಲಿ 333,223 ವಿದ್ಯಾರ್ಥಿಗಳು ಭಾಗವಹಿಸಿದ್ದು, 289,035 ವಿದ್ಯಾರ್ಥಿಗಳು ಯಶಸ್ವಿಯಾಗಿ ಉತ್ತೀರ್ಣರಾಗಿದ್ದರು.
ಒಂದು ಅಥವಾ ಎರಡು ವಿಷಯಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಜೂನ್ 12 ರಿಂದ 19 ರವರೆಗೆ ನಡೆಸಲಾದ ಪೂರಕ ಪರೀಕ್ಷೆಗೆ ಹಾಜರಾಗಿದ್ದರು.