ಮಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು ದಕ್ಷಿಣ ಕನ್ನಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಡಿಡಿಪಿಐ) ದಯಾನಂದ ಆರ್ ನಾಯ್ಕ್ ಅವರನ್ನು ಬುಧವಾರ ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಕಲಬುರ್ಗಿ ಡಿಡಿಪಿಐ ಆಗಿದ್ದ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನೇಮಿಸಿದೆ.
ಹಿಂದೂ ಧರ್ಮ ಮತ್ತು ಅದರ ದೇವರುಗಳ ವಿರುದ್ಧ ಇಂಗ್ಲಿಷ್ ಶಿಕ್ಷಕಿಯೊಬ್ಬರು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾದ ಸೇಂಟ್ ಜೆರೋಸಾ ಶಾಲೆಯ ಘಟನೆಯನ್ನು ನಾಯಕ್ ನಿರ್ವಹಿಸಿದ ರೀತಿಗೆ ವ್ಯಾಪಕ ಟೀಕೆಗಳು ವ್ಯಕ್ತವಾದ ನಂತರ ಈ ಬೆಳವಣಿಯಾಗಿದೆ. ಡಿಡಿಪಿಐ ನಾಯ್ಕ್ ಅವರು ಸೂಕ್ಷ್ಮ ವಿಷಯವನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ರಮಾನಾಥ್ ರೈ ಮಂಗಳವಾರ ಆರೋಪಿಸಿದ್ದರು.
ಈ ಘಟನೆಗೆ ಸಿಪಿಐ(ಎಂ) ಮತ್ತು ಇತರ ಸಂಘಟನೆಗಳು ನಾಯಕ್ ಅವರನ್ನು ದೂಷಿಸಿದ್ದವು. ಅಲ್ಲದೇ, ಘಟನೆ ಬಗ್ಗೆ ತನಿಖೆ ನಡೆಸಲು ಅವರಿಗೆ ಅವಕಾಶ ನೀಡದಂತೆ ಸರ್ಕಾರವನ್ನು ಒತ್ತಾಯಿಸಿದ್ದವು. ನಾಯಕ್ ಅವರನ್ನು ಬೆಳಗಾವಿಯ ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.
ಆರೋಪ ನಿರಾಕರಿಸಿದ ಮಂಗಳೂರು ಧರ್ಮಪ್ರಾಂತ್ಯ, ಬಿಜೆಪಿ ಶಾಸಕನ ವಿರುದ್ಧ ವಾಗ್ದಾಳಿ: ಈ ಮಧ್ಯೆ ಜೆರೋಸಾ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಮಂಗಳೂರು ಧರ್ಮಪ್ರಾಂತ್ಯ ಈ ಬಗ್ಗೆ ನ್ಯಾಯಕ್ಕಾಗಿ ಕೋರಿದೆ. ಧಾರ್ಮಿಕ ಮುಖಂಡರಾದ ಜೆ ಬಿ ಸಲ್ದಾನ ಮತ್ತು ರಾಯ್ ಕ್ಯಾಸ್ಟಲಿನೊ ಅವರು ಶಿಕ್ಷಕಿ ವಿರುದ್ಧದ ಆರೋಪಗಳನ್ನು ಆಧಾರರಹಿತ ಎಂದು ಬಣ್ಣಿಸಿದ್ದಾರೆ.
ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಶಿಕ್ಷಕಿ ಭರವಸೆ ನೀಡಿದ ಬಳಿಕವೂ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಅವರು ಶಾಲೆಯ ಮುಂದೆ ಪ್ರತಿಭಟನೆ ನಡೆಸುವ ಮೂಲಕ ನ್ಯಾಯಯುತ ತನಿಖೆಯ ಸಾಂವಿಧಾನಿಕ ಪ್ರಕ್ರಿಯೆಯ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.
ಶಾಸಕರು ಮಹಿಳಾ ಸಿಬ್ಬಂದಿಯ ಮೇಲೆ ಹಗೆತನದ ವಾತಾವರಣ ಸೃಷ್ಟಿಸಿ ಕಿರುಕುಳ ನೀಡಲು ಆರಂಭಿಸಿದ್ದು, ಅಂತಿಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ವಿದ್ಯಾರ್ಥಿ ಸಮುದಾಯದ ಸುರಕ್ಷತೆಗಾಗಿ ಒತ್ತಡಕ್ಕೆ ಮಣಿದು ಶಿಕ್ಷಕಿಯನ್ನು ಅಮಾನತುಗೊಳಿಸಿದ್ದಾರೆ ಎಂದು ಅವರು ದೂರಿದ್ದಾರೆ.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.