ಸ್ಟಾಫ್ ಸೆಲೆಕ್ಷನ್ ಕಮಿಷನ್ ಖಾಲಿ ಇರುವ 1558 ಮಲ್ಟಿ ಟಾಸ್ಕಿಂಗ್ ಸ್ಟಾಫ್, ಹವಲ್ದಾರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಹ ಮತ್ತು ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ಟಾಫ್ ಸೆಲೆಕ್ಷನ್ ಕಮಿಷನ್ನ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು. ಆಸಕ್ತರು ಜುಲೈ 21, 2023 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ssc.nic.in ಗೆ ಭೇಟಿ ನೀಡಬಹುದು.
ಹುದ್ದೆಯ ಮಾಹಿತಿ:
ಮಲ್ಟಿ ಟಾಸ್ಕಿಂಗ್ ಸ್ಟಾಫ್- 1198
ಹವಲ್ದಾರ್ – 360
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅನುಸಾರ ಕರ್ನಾಟಕದಲ್ಲಿ 52 ಹುದ್ದೆಗಳು ಖಾಲಿ ಇವೆ.
ವಿದ್ಯಾರ್ಹತೆ:
ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಮಲ್ಟಿ ಟಾಸ್ಕಿಂಗ್ ಸ್ಟಾಫ್- 18ರಿಂದ 25 ವರ್ಷ
ಹವಲ್ದಾರ್ (ಸಿಬಿಎನ್)- 18ರಿಂದ 25 ವರ್ಷ
ಹವಲ್ದಾರ್ (ಸಿಬಿಐಸಿ)- 18ರಿಂದ 27 ವರ್ಷ
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PwBD (ಸಾಮಾನ್ಯ) ಅಭ್ಯರ್ಥಿಗಳು- 10 ವರ್ಷ
PwBD (OBC) ಅಭ್ಯರ್ಥಿಗಳು-13 ವರ್ಷ
PwBD (SC/ST) ಅಭ್ಯರ್ಥಿಗಳು- 15 ವರ್ಷ
ವೇತನ:
ನಿಗದಿಪಡಿಸಿಲ್ಲ. ಅಭ್ಯರ್ಥಿಗಳ ಅನುಭವ & ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ಕೊಡಲಾಗುತ್ತದೆ.
ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ
ಅರ್ಜಿ ಶುಲ್ಕ:
SC/ST/PwBD/ ಮಾಜಿ ಸೈನಿಕ & ಮಹಿಳಾ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ
ಉಳಿದ ಎಲ್ಲಾ ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ಪಾವತಿಸಬೇಕು.
ಪಾವತಿಸುವ ಬಗೆ- ಆನ್ ಲೈನ್ / ಚಲನ್
ಆಯ್ಕೆ ಪ್ರಕ್ರಿಯೆ:
ಕಂಪ್ಯೂಟರ್ ಆಧಾರಿತ ಪರೀಕ್ಷೆ
ದೈಹಿಕ ದಕ್ಷತೆ ಪರೀಕ್ಷೆ (PET)/ದೈಹಿಕ ಪ್ರಮಾಣಿತ ಪರೀಕ್ಷೆ (PST)
ಸಂದರ್ಶನ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 30/06/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಜುಲೈ 21, 2023