ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯ ಮತಎಣಿಕೆ ಶನಿವಾರ (ಮೇ 13) ಬೆಳಗ್ಗೆ 8ಗಂಟೆಯಿಂದ ಆರಂಭಗೊಂಡಿದೆ.
ಆರಂಭಿಕ ಟ್ರೆಂಡ್ ಪ್ರಕಾರ ಕಾಂಗ್ರೆಸ್ 100 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಗಳಿಸಿದೆ. ಹಾಗಾಗಿ ಸ್ಪಷ್ಟ ಬಹುಮತ ಪಡೆಯಲಿದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ. ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಸಿಗಲಿದೆ.
ವಿಧಾನಸಭೆಯ 224 ಕ್ಷೇತ್ರಗಳಲ್ಲಿ ಸ್ಪಷ್ಟ ಬಹುಮತಕ್ಕೆ 113 ಸ್ಥಾನಗಳನ್ನು ಗಳಿಸಬೇಕಿದೆ.
ಬೆಳಿಗ್ಗೆ 9.25ರ ಸುಮಾರಿಗೆ ಕಾಂಗ್ರೆಸ್ 118, ಬಿಜೆಪಿ 82 ಮತ್ತು ಜೆಡಿಎಸ್ 19 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
Saval TV on YouTube