Saval TV on YouTube
ಬೆಂಗಳೂರು(Bengaluru): ಫೆಬ್ರವರಿ 17 ರಂದು ರಾಜ್ಯ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ತಿಂಗಳ 3ನೇ ವಾರ ಬಜೆಟ್ ಮಂಡಿಸಲಾಗುವುದು. ಈಗಾಗಲೇ ಬಜೆಟ್ ಹಿನ್ನಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.
ಸಿಎಂ ಬೊಮ್ಮಾಯಿ ಅವರು ಮುಂಬರುವ ಬಜೆಟ್’ಗೆ ಸಿದ್ದತೆ ಆರಂಭಿಸಿದ್ದು, ಕಳೆದ ಬಜೆಟ್ ನಲ್ಲಿ ಘೋಷಣೆಯಾಗಿರುವ ಯೋಜನೆಗಳ ಅನುಷ್ಟಾನ ಕುರಿತು ಸಭೆ ನಡೆಸಿದ್ದಾರೆ.