ಬೆಂಗಳೂರು: ನಾಳೆ ಎಂದರೆ ಗುರುವಾರ ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆಯ ಸ್ಥಳವನ್ನು ಬದಲಾವಣೆ ಮಾಡಲಾಗಿದೆ.
ಜೂನ್ 19 ಎಂದರೆ ನಾಳೆ ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿತ್ತು. ಆದರೆ ಕಾರಣಾಂತರಗಳಿಂದಾಗಿ ನಂದಿ ಬೆಟ್ಟದಲ್ಲಿ ನಡೆಯಬೇಕಿದ್ದ ಸಭೆಯನ್ನು ಸ್ಥಳಾಂತರ ಮಾಡಲಾಗಿದೆ.
ನಾಳೆ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಸಭೆಯನ್ನು ವಿಧಾನಸೌಧದಲ್ಲಿಯೇ ನಡೆಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ರಾಜ್ಯ ಸರ್ಕಾರ, ಗುರುವಾರ ಮಧ್ಯಾಹ್ನ 12 ಗಂಟೆಗೆ ನಂದಿ ಗಿರಿಧಾಮದಲ್ಲಿ ನಿಗದಿಯಾಗಿದ್ದ ಸಂಪುಟ ಸಭೆಯನ್ನು ಬೆಂಗಳೂರಿನ ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರಕ್ಕೆ ಸ್ಥಾಳಾಂತರಿಸಲಾಗಿದೆ ಎಂದು ತಿಳಿಸಲಾಗಿದೆ.














