ಮನೆ ರಾಜ್ಯ ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಂಪುಟ ಸಭೆ ನಿಗದಿ

ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಂಪುಟ ಸಭೆ ನಿಗದಿ

0

ಬೆಂಗಳೂರು : ರಾಜ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡುವ ಸಂಬಂಧ ಮಾರ್ಚ್.13ರಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿ ಪಡಿಸಲಾಗಿದೆ.

ನಾಳೆ ದಿ. 13ರಂದು ಗುರುವಾರ ಸಂಜೆ 7 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 6ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ನಿಗದಿ ಪಡಿಸಲಾಗಿದೆ.

ಮಾರ್ಚ್.13ರ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡಲಿದ್ದಾರೆ. ಅಂದು ಸಿಎಂ ಸಿದ್ಧರಾಮಯ್ಯ ಅವರು ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯೂ ಅಸ್ತು ಎನ್ನಲಿದ್ದಾರೆ.