ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು ಶುಕ್ರವಾರ ತನ್ನ ಮೊದಲ ಬಜೆಟ್ ನ್ನು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಲಿದ್ದಾರೆ.
ಚುನಾವಣಾ ಪೂರ್ವ ಭರವಸೆಯಂತೆ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ ಸೇರಿದಂತೆ 5 ಗ್ಯಾರಂಟಿ ಕಾರ್ಯಕ್ರಮಗಳ ಜಾರಿಗೆ ಸರಕಾರ ಸಿದ್ಧತೆ ಮಾಡಿಕೊಂಡಿದೆ. ಇದಕ್ಕೆ ಅಗತ್ಯ ಅನುದಾನವನ್ನು ಬಜೆಟ್ ನಲ್ಲಿ ಹಂಚಿಕೆ ಮಾಡಲಾಗುತ್ತದೆ.
ಸಿದ್ದರಾಮಯ್ಯ ಅವರು ಈಗಾಗಲೇ ರಾಜ್ಯದಲ್ಲಿ 13 ಬಜೆಟ್ ಮಂಡಿಸಿದ್ದು, ಇದೀಗ ದಾಖಲೆಯ 14ನೇ ಬಜೆಟ್ ಮಂಡಿಸುತ್ತಿದ್ದಾರೆ.
ಇಂದು ಮಧ್ಯಾಹ್ನ 12 ಗಂಟೆಗೆ ಪ್ರಸಕ್ತ ಸಾಲಿನ ಆಯವ್ಯಯ ಮಂಡನೆಯಾಗಲಿದ್ದು, ಸಿದ್ದರಾಮಯ್ಯ ಅವರು ಇಂದು ಮಂಡಿಸುವ ಬಜೆಟ್ ಇತಿಹಾಸವನ್ನು ಸೃಷ್ಟಿಸಲಿದೆ. ರಾಜ್ಯದಲ್ಲಿ ಅತೀ ಹೆಚ್ಚು ಬಜೆಟ್ ಮಂಡಿಸಿದ ಖ್ಯಾತಿ ಸಿದ್ದರಾಮಯ್ಯ ಅವರ ಹೆಗಲೇರಲಿದೆ.