ಹಾವೇರಿ: ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನವಾಗುತ್ತೆ, ನಾನು ಗ್ಯಾರಂಟಿ ಕೊಡುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಮುಂದೆ ಬಿಜೆಪಿ ಸರ್ಕಾರವೇ ಬರಲಿದೆ. ಸಿಎಂ ಸಿದ್ದರಾಮಯ್ಯ ರೈತರನ್ನು ಕಡೆಗಣನೆ ಮಾಡಿದ್ದಾರೆ. ಈ ಹಿನ್ನಲೆ ರಾಜ್ಯದ ರೈತರ ಪಾಲಿಗೆ ಈ ಸರ್ಕಾರ ಸತ್ತುಹೋಗಿದೆ. ಇನ್ನು 200 ಯೂನಿಟ್ ವಿದ್ಯುತ್ ಯಾರಿಗೆ ಪ್ರೀ ಕೊಟ್ಟಿದ್ದೀರಿ, ಒಬ್ಬರ ಹೆಸರು ಹೇಳಲಿ ಸಾಕು. ಗೃಹಲಕ್ಷ್ಮೀ ಯೋಜನೆ ಒಂದು ತಿಂಗಳು ಬಂದರೆ, ಇನ್ನೊಂದು ತಿಂಗಳು ಬರುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
Saval TV on YouTube