ಮನೆ ರಾಜ್ಯ ಅನಿರ್ಧಿಷ್ಟಾವಧಿ ಮುಷ್ಕರ ಹಿಂಪಡೆದ ರಾಜ್ಯ ಸರ್ಕಾರಿ ನೌಕರರು

ಅನಿರ್ಧಿಷ್ಟಾವಧಿ ಮುಷ್ಕರ ಹಿಂಪಡೆದ ರಾಜ್ಯ ಸರ್ಕಾರಿ ನೌಕರರು

0

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಾಗೂ ರಾಜ್ಯ ಸರ್ಕಾರದ ನಡುವಿನ ಸಂಧಾನ ಯಶಸ್ವಿಯಾಗಿದ್ದು, ಸರ್ಕಾರಿ ನೌಕರರು ತಮ್ಮ ಅನಿರ್ಧಿಷ್ಟಾವಧಿ ಮುಷ್ಕರವನ್ನು ಹಿಂಪಡೆದಿದ್ದಾರೆ.

ಮಧ್ಯಂತರ ಪರಿಹಾರ ಹಾಗೂ ಹಳೆಯ ಪಿಂಚಣಿ ಪದ್ಧತಿ ಮರು ಜಾರಿ ಕುರಿತು ಅಧ್ಯಯನಕ್ಕೆ ಉನ್ನತ ಮಟ್ಟದ ಸಮಿತಿ ನೇಮಿಸಲು ಸರ್ಕಾರ ಆದೇಶ ಹೊರಡಿಸಿರುವುದರಿಂದ ರಾಜ್ಯ ಸರ್ಕಾರಿ ನೌಕರರು ಮುಷ್ಕರ ಅಂತ್ಯಗೊಳಿಸಿದ್ದಾರೆ.

ಹಣಕಾಸು ಇಲಾಖೆ ಆದೇಶ ಹೊರಡಿಸಿದ ಬಳಿಕ ಸಂಘದ ಪದಾಧಿಕಾರಿಗಳು ಮತ್ತು ನೌಕರರ ವಿವಿಧ ಸಂಘಟನೆಗಳ ಪ್ರಮುಖರ ಜತೆ ಸಭೆ ನಡೆಸಿದ ಬಳಿಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಮುಷ್ಕರ‌ ಅಂತ್ಯಗೊಳಿಸುವ ಘೋಷಣೆ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಧ್ಯಂತರ ಪರಿಹಾರವಾಗಿ ಶೇಕಡ 17ರಷ್ಟು ವೇತನ ಹೆಚ್ಚಳ ಮತ್ತು ಎನ್ಪಿಎಸ್ ಮರು ಜಾರಿ ಕುರಿತು ಅಧ್ಯಯನಕ್ಕೆ ಸಮಿತಿ ನೇಮಿಸುವ ತೀರ್ಮಾನವನ್ನು ಒಪ್ಪಿಕೊಂಡು ಮುಷ್ಕರ ಅಂತ್ಯಗೊಳಿಸುತ್ತಿದ್ದೇವೆ ಎಂದರು.

ಶೇಕಡ 40ರಷ್ಟು ವೇತನ ಹೆಚ್ಚಳ ಸೇರಿದಂತೆ ಎಲ್ಲ ಬೇಡಿಕೆಗಳು ಈಡೇರಬೇಕು. ಈಗ ತಾತ್ಕಾಲಿಕವಾಗಿ ಮುಷ್ಕರ ಸ್ಥಗಿತವಾಗಲಿದೆ. ಮುಂದಿನ ದಿನಗಳಲ್ಲಿ ಬೇಡಿಕೆ ಈಡೇರದಿದ್ದರೆ ಮತ್ತೆ ಹೋರಾಟ ಆರಂಬಿಸಲಾಗುವುದು ಎಂದು ಹೇಳಿದರು.

ಹಿಂದಿನ ಲೇಖನಮುಕೇಶ್ ಅಂಬಾನಿ ಮತ್ತು ಕುಟುಂಬಕ್ಕೆ ಭಾರತದ ಜೊತೆಗೆ ವಿದೇಶದಲ್ಲಿಯೂ ಝಡ್ ಪ್ಲಸ್ ಭದ್ರತೆ ಒದಗಿಸಲು ಸುಪ್ರೀಂ ಆದೇಶ
ಮುಂದಿನ ಲೇಖನದೆಹಲಿ ಸಂಪುಟಕ್ಕೆ ಅತಿಶಿ, ಸೌರಭ್ ಭಾರದ್ವಾಜ್ ಹೆಸರು ಶಿಫಾರಸ್ಸು