ಮನೆ ರಾಜ್ಯ ವೇತನ ಪರಿಷ್ಕರಣೆ, ಇತರ ಬೇಡಿಕೆಗಳ ಈಡೇರಿಕೆಗಾಗಿ ಮಾರ್ಚ್ 1 ರಿಂದ ರಾಜ್ಯ ಸರ್ಕಾರಿ ನೌಕರರ ಅನಿರ್ಧಿಷ್ಟಾವಧಿ...

ವೇತನ ಪರಿಷ್ಕರಣೆ, ಇತರ ಬೇಡಿಕೆಗಳ ಈಡೇರಿಕೆಗಾಗಿ ಮಾರ್ಚ್ 1 ರಿಂದ ರಾಜ್ಯ ಸರ್ಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ

0

ಮೈಸೂರು: ವೇತನ ಪರಿಷ್ಕರಣೆ ಸೇರಿದಂತೆ ಇತರ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 1 ರಿಂದ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕರೆ ನೀಡಿದೆ.

ಫೆ.21 ರಂದು ನಡೆದ ರಾಜ್ಯ ಕಾರ್ಯಕಾರಿಣಿ ಮತ್ತು ವೃಂದ ಸಂಘಗಳ ಸಭೆಯಲ್ಲಿ ಕೈಗೊಂಡ ಸರ್ವಾನುಮತದ ತೀರ್ಮಾನದಂತೆ ರಾಜ್ಯದ ಸರ್ಕಾರಿ ಅಧಿಕಾರಿ, ನೌಕರರು ಮಾರ್ಚ್ 1 ರಿಂದ ಕರ್ತವ್ಯಕ್ಕೆ ಗೈರು ಹಾಜರಾಗಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ.

ವೇತನ ಪರಿಷ್ಕರಣೆಗೆ ಸಂಬಂಧಿಸಿದ ಮಧ್ಯಂತರ ವರದಿಯನ್ನು 7ನೇ ವೇತನ ಆಯೋಗದಿಂದ ಶೀಘ್ರವಾಗಿ ಪಡೆದು ಮಾರ್ಚ್ 1 ರಿಂದ ಜಾರಿಗೆ ಬರುವಂತೆ ಶೇ.40 ರಷ್ಟು ವೇತನ ಹೆಚ್ಚಳ ಸೌಲಭ್ಯವನ್ನು ಸರ್ಕಾರಿ ಆದೇಶ ಹೊರಡಿಸುವ ಮೂಲಕ ಅನುಷ್ಟಾನಗೊಳಿಸಬೇಕು. ಪಂಜಾಬ್, ರಾಜಸ್ಥಾನ, ಛತ್ತೀಸ್ ಘಡ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯಗಳ ಮಾದರಿಯಲ್ಲಿ ಎನ್’ಪಿಎಸ್ ರದ್ದುಪಡಿಸಿ, ಒಪಿಎಸ್ ಜಾರಿಗೊಳಿಸಬೇಕೆಂದು ರಾಜ್ಯ ಸರ್ಕಾರಿ ನೌಕರರು ಸಂಘ ಒತ್ತಾಯಿಸಿದೆ.

ಹಿಂದಿನ ಲೇಖನಬೇರೆ ರಾಜ್ಯಗಳಲ್ಲಿ ಎಸಿಬಿ ಇಟ್ಟುಕೊಂಡು ಇಲ್ಲಿ ಸತ್ಯ ಹರಿಶ್ಚಂದ್ರನ ಮೊಮ್ಮಕ್ಕಳ ರೀತಿಯಲ್ಲಿ ‌ಮಾತಾಡುತ್ತಾರೆ : ಸಿದ್ದರಾಮಯ್ಯ
ಮುಂದಿನ ಲೇಖನಅದಾನಿ ವಿರುದ್ಧದ ಹಿಂಡೆನ್’ಬರ್ಗ್ ವರದಿ: ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ ಮಾಡಲು ನಿರಾಕರಿಸಿದ ಸುಪ್ರೀಂ ಕೋರ್ಟ್