ಮನೆ ಸುದ್ದಿ ಜಾಲ ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಜೆ.ಅಲೆಕ್ಸಾಂಡರ್ ನಿಧನ

ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಜೆ.ಅಲೆಕ್ಸಾಂಡರ್ ನಿಧನ

0

ಬೆಂಗಳೂರು: ಕರ್ನಾಟಕದ ಸರ್ಕಾರದ ನಿವೃತ್ತ ಮುಖ್ಯಕಾರ್ಯದರ್ಶಿ ಹಾಗೂ ರಾಜ್ಯದಲ್ಲಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದ ಜೆ. ಅಲೆಕ್ಸಾಂಡರ್‌ (83) ಅವರು ಬೆಂಗಳೂರಿನಲ್ಲಿ ಶುಕ್ರವಾರ ನಿಧನರಾದರು.

ಶುಕ್ರವಾರ ಸಂಜೆ ಹೃದಯಾಘಾತಕ್ಕೆ ಒಳಗಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆಯೇ ಅವರು ಮೃತಪಟ್ಟರು ಎಂದು ಮೂಲಗಳು ಹೇಳಿವೆ. ಮೃತರು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಶನಿವಾರ ಬೆಂಗಳೂರಿನಲ್ಲಿ ನಡೆಯಲಿದೆ.

ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯವರಾದ ಅಲೆಕ್ಸಾಂಡರ್‌, ಕರ್ನಾಟಕ ಶ್ರೇಣಿಯ ಐಎಎಸ್‌ ಅಧಿಕಾರಿಯಾಗಿ ರಾಜ್ಯಕ್ಕೆ ಬಂದಿದ್ದರು. ಸರ್ಕಾರದ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ನಿವೃತ್ತಿ ಬಳಿಕ ರಾಜಕಾರಣ ಪ್ರವೇಶಿಸಿದ್ದ ಅವರು, 1999ರ ವಿಧಾನಸಭಾ ಚುನಾವಣೆಯಲ್ಲಿ ಭಾರತಿ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಎಸ್‌.ಎಂ. ಕೃಷ್ಣ ಸರ್ಕಾರದಲ್ಲಿ ಸಚಿವರಾಗಿಯೂ ಕೆಲಸ ಮಾಡಿದ್ದರು .ಬೆಂಗಳೂರಿನ ಯಂಗ್‌ ಮೆನ್ಸ್‌ ಕ್ರಿಶ್ಚಿಯನ್ ಅಸೋಸಿಯೇಷನ್‌ (ವೈಎಂಸಿಎ) ಅಧ್ಯಕ್ಷರಾಗಿಯೂ ಅವರು ಕೆಲಸ ಮಾಡುತ್ತಿದ್ದರು.

ಹಿಂದಿನ ಲೇಖನವಿಶ್ವ ವಿಖ್ಯಾತ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಮುಂದಿನ ಲೇಖನಕುಟುಂಬಸ್ಥರೊಂದಿಗೆ ಸಂಕ್ರಾಂತಿ ಆಚರಿಸಿದ ನಟ ಚಿರಂಜೀವಿ