ಮನೆ ರಾಜ್ಯ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು ವಿತರಿಸಲು ರಾಜ್ಯ ಸರ್ಕಾರ ಆದೇಶ

ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು ವಿತರಿಸಲು ರಾಜ್ಯ ಸರ್ಕಾರ ಆದೇಶ

0

ಬೆಂಗಳೂರು: ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆ ಹಣ್ಣು ವಿತರಿಸಲು ಕರ್ನಾಟಕ ಸರ್ಕಾರ ಆದೇಶಿಸಿದೆ. 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ ಮಾಡುವಂತೆ ಇಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Join Our Whatsapp Group

ಶಾಲಾ ಶಿಕ್ಷಣ ಇಲಾಖೆ ಪಿ. ಎಂ. ಪೋಷಣ್ ನಿರ್ದೇಶಕ ಶುಭ ಕಲ್ಯಾಣ್ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1-8ನೇ ತರಗತಿ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಬೇಯಿಸಿದ ಮೊಟ್ಟೆ (ಮೊಟ್ಟೆ ಸ್ವೀಕರಿಸದ ಮಕ್ಕಳಿಗೆ ಬಾಳೆ ಹಣ್ಣು ಅಥವಾ ಶೇಂಗಾ ಚಿಕ್ಕಿ) ವಿತರಿಸುವಂತೆ ಸೂಚಿಸಿದ್ದಾರೆ.

ಮಧ್ಯಾಹ್ನದ ಬಿಸಿಯೂಟದ ಜೊತೆಗೆ 1ರಿಂದ 8ನೇ ತರಗತಿ ಮಕ್ಕಳಿಗೆ ಅಪೌಷ್ಠಿಕತೆ ಮತ್ತು ಅನಿಮಿಯ ನಿವಾರಣೆಗಾಗಿ ಪೂರಕ ಪೌಷ್ಠಿಕ ಆಹಾರವಾಗಿ ಬೇಯಿಸಿದ ಮೊಟ್ಟೆ(ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಬಾಳೆ ಹಣ್ಣು ಅಥವಾ ಶೇಂಗಾ ಚಿಕ್ಕಿ) ಒಬ್ಬ ವಿದ್ಯಾರ್ಥಿಗೆ ವಾರದಲ್ಲಿ ಒಂದು ಮೊಟ್ಟೆಯಂತೆ ಮೊದಲ ಹಂತದಲ್ಲಿ ದಿನಾಂಕ 20-8-2-23ರಿಂದ ಪ್ರಾರಂಭಿಸಿ 15-723 ರವರೆಗೆ ಸರ್ಕಾರದ ಮುಂದಿನ ಆದೇಶ ಬರುವವರೆಗೂ ವಿತರಿಸುವಂತೆ ಈ ಮೂಲಕ ತಿಳಿಸಲಾಗಿದೆ.  ಈ ಸಂಬಂಧ ಪ್ರತಿ ವಿದ್ಯಾರ್ಥಿಗೆ ಒಂದು ದಿನಕ್ಕೆ ಒಂದು ಮೊಟ್ಟೆ/ಬಾಳೆ ಹಣ್ಣು/ಶೇಂಗಾ ಚಿಕ್ಕಿಯ ಘಟಕ ವೆಚ್ಚ 8ರೂ.ರಂತೆ ನಿಗದಿಪಡಿಸಿರುತ್ತದೆ. ಇದರಂತೆ ಭರಿಸಲು ಸೂಚಿಸಿದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಕಲ್ಯಾಣ ಕರ್ನಾಟಕ ವಿಭಾಗದ 8 ಜಿಲ್ಲೆಗಳಾದ ಯಾದಗಿರಿ, ಕಲಬುರಗಿ, ಬಳ್ಳಾರಿ, ರಾಯಚೂರು, ವಿಜಯನಗರ, ಬಳ್ಳಾರಿ, ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ 2023-24ನೇ ಸಾಲಿನ ಪಿಎಬಿ ಅನುಮೋದನೆ ಮತ್ತು ಅನುದಾನ ಹಂಚಿಕೆಯಂತೆ ಕೇಂದ್ರ ಮತ್ತು ರಾಜ್ಯದ ಪಾಲಿನ ಪ್ಲೆಕ್ಸಿ ಅನುದಾನದಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1-8ನೇ ತರಗತಿ ವಿದ್ಯಾರ್ಥಿಗಳಿಗೆ ಸದರಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವಂತೆ ಸೂಚಿಸಲಾಗಿದೆ.

ಇನ್ನು ಉಳಿದಂತೆ 23 ಜಿಲ್ಲೆಗಳಲ್ಲಿ 1ರಿಂದ 8ನೇ ತರಗತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಫಲಾನುಭವಿ ಮಕ್ಕಳಿಗೆ ಶಾಲೆಯ ಮುಖ್ಯ ಶಿಕ್ಷಕರು ಹಿಂದಿನ ಸಾಲಿನ ಮಾರ್ಗಸೂಚಿಯಂತೆ ಎಸ್ ​ಡಿಎಂಸಿ ನೇತೃತ್ವದಲ್ಲಿ ಅಗತ್ಯ ಕ್ರಮಕೈಗೊಂಡು ಪೂರಕ ಪೌಷ್ಠಿಕ ಆಹಾರವನ್ನು ವಿತರಿಸುವಂತೆ ತಿಳಿಸಿದೆ.

ಹಿಂದಿನ ಲೇಖನಕುಸಿಯುತ್ತಿದೆ ಕೆಆರ್ ಎಸ್ ಡ್ಯಾಂನ ನೀರಿನ ಮಟ್ಟ: ಕುಡಿಯುವ ನೀರಿಗೆ ಸಮಸ್ಯೆಯಾಗುವ ಆತಂಕ
ಮುಂದಿನ ಲೇಖನಹೈದರಾಬಾದ್‌: ಇಬ್ಬರು ತೃತೀಯ ಲಿಂಗಿಗಳ ಹತ್ಯೆ