ಮನೆ ಸುದ್ದಿ ಜಾಲ ವೈದ್ಯಕೀಯ ಶಿಕ್ಷಣ ಶುಲ್ಕ ಇಳಿಸಲು ರಾಜ್ಯ ಸರ್ಕಾರ ನಿರ್ಧಾರ: ಸಿಎಂ ಬೊಮ್ಮಾಯಿ

ವೈದ್ಯಕೀಯ ಶಿಕ್ಷಣ ಶುಲ್ಕ ಇಳಿಸಲು ರಾಜ್ಯ ಸರ್ಕಾರ ನಿರ್ಧಾರ: ಸಿಎಂ ಬೊಮ್ಮಾಯಿ

0

ದಾವಣಗೆರೆರಾಜ್ಯದಲ್ಲಿ  ವೈದ್ಯಕೀಯ ಶಿಕ್ಷಣ ಶುಲ್ಕ ಇಳಿಸಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಘೋಷಣೆ ಮಾಡಿದ್ದಾರೆ.

ದಾವಣಗೆರೆಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣದ ಶುಲ್ಕವನ್ನು ಕಡಿಮೆ ಮಾಡುತ್ತೇವೆ ಎಂದು ಉಕ್ರೇನ್ ನಿಂದ ಹುಟ್ಟೂರಿಗೆ ವೈದ್ಯಕೀಯ ವಿದ್ಯಾರ್ಥಿ ನವೀನ್ ಮೃತದೇಹ ಬಂದ ಬೆನ್ನಲ್ಲೇ ತಿಳಿಸಿದ್ದಾರೆ.

ಈಗಿರುವ ಮೆಡಿಕಲ್ ಶಿಕ್ಷಣದ ವೆಚ್ಚ ಹೆಚ್ಚಾಗುತ್ತಿದೆ. ಸರ್ಕಾರದ ಸೀಟಿಗೆ ಕಡಿಮೆ ಶುಲ್ಕವಿದ್ದರೂ ಕೂಡ ಖಾಸಗಿ ವಲಯದಲ್ಲಿ ಬಹಳ ಹೆಚ್ಚಾಗುತ್ತಿದೆ. ಶೇಕಡಾ 90-95ರಷ್ಟು ಅಂಕಗಳನ್ನು ದ್ವಿತೀಯ ಪಿಯುಸಿಯಲ್ಲಿ ಗಳಿಸಿದವರು ನೀಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗದೆ ಮ್ಯಾನೇಜ್ ಮೆಂಟ್ ಸೀಟು, ಎನ್ ಆರ್ಐ ಸೀಟುಗಳಿಗೆ ಹೋಗುತ್ತಿದ್ದಾರೆ. ಇಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಖರ್ಚು-ವೆಚ್ಚಗಳು ಹೆಚ್ಚಾಗುತ್ತಿರುವುದರಿಂದ ವಿದೇಶಗಳಿಗೆ ಹೋಗುತ್ತಿದ್ದಾರೆ. ಈ ಬಗ್ಗೆ ನಾನು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದು, ನಮ್ಮ ರಾಜ್ಯದಲ್ಲಿ ಶುಲ್ಕ ಕಡಿಮೆ ಮಾಡಲು ಎಬಿಸಿ ಕ್ಯಾಟಗರಿ ಮಾಡಬೇಕು ಎಂದು ತೀರ್ಮಾನ ಮಾಡಿದ್ದೇವೆ ಎಂದರು.

ಇಂದು ಇಡೀ ವೈದ್ಯಕೀಯ ಕೋರ್ಸ್ ರಾಷ್ಟ್ರೀಯ ವೈದ್ಯಕೀಯ ಕೌನ್ಸಿಲ್ ನ ಅಧೀನದಲ್ಲಿದೆ.ಉಕ್ರೇನ್ ಮೇಲೆ ರಷ್ಯಾ ಯುದ್ಧವಾದ ಮೇಲೆ ಅವರು ಕೂಡ ಚಿಂತನೆಯನ್ನು ನಡೆಸುತ್ತಿದ್ದಾರೆ. ಇದರ ಬಗ್ಗೆ ಪುನರ್ ಚಿಂತನೆ ನಡೆದಿದೆ ಎಂದರು.

ಉಕ್ರೇನ್​ನಿಂದ ಬಂದ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ. ಅಲ್ಲಿನ ವೈದ್ಯಕೀಯ ಕೋರ್ಸ್​ಗೂ, ಇಲ್ಲಿಗೂ ಬದಲಾವಣೆ ಇದೆ‌. ಈಗಾಗಲೇ ಇಂತಹ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಭಾರತೀಯ ವೈದ್ಯಕೀಯ ಮಂಡಳಿ ಚಿಂತನೆ ಮಾಡುತ್ತಿದೆ ಎಂದು ಕೂಡ ಹೇಳಿದರು. 

ವೈದ್ಯಕೀಯ ವಿದ್ಯಾರ್ಥಿಗಳು ಇಂದು ಸಿಎಂ ಭೇಟಿ ಆಗಲಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದಲ್ಲಿ ಸಿಎಂ ಬೊಮ್ಮಾಯಿ ಜತೆ ಚರ್ಚೆ ನಡೆಸಲಿದ್ದಾರೆ.