ಮೈಸೂರು : ಆಧುನಿಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ ಜೂನ್ 4 ರಂದು ರಾಜ್ಯ ಮಟ್ಟದಲ್ಲಿ “ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ”ಯನ್ನು ಮೈಸೂರಿನಲ್ಲಿ ಆಯೋಜಿಸಲಾಗಿದೆ. ಈ ಸಂಬಂಧ ಆ ದಿನದಂದು ಬೆಳಿಗ್ಗೆ 8.30 ಗಂಟೆಗೆ ‘ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಜೀವನ ಮತ್ತು ಸಾಧನೆಗಳ ಕುರಿತು’ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಕಲಾಮಂದಿರದಲ್ಲಿ ನಡೆಸಲಾಗಿದೆ.
ಈ ಸ್ಪರ್ಧೆಯನ್ನು 6 ರಿಂದ 13 ವರ್ಷ ಮತ್ತು 14 ರಿಂದ 18 ವರ್ಷಗಳ ವಯೋಮಿತಿಗೆ ಒಳಪಟ್ಟಂತೆ ಎರಡು ವಿಭಾಗಗಳಲ್ಲಿ ನಡೆಸಲಾಗುತ್ತಿದೆ. ಭಾಗವಹಿಸುವ ಎಲ್ಲರಿಗೂ ಪ್ರಮಾಣ ಪತ್ರ ಹಾಗೂ ಪ್ರತಿ ತಲಾ ಮೂರು (ಪ್ರಥಮ, ದ್ವಿತೀಯ, ತೃತೀಯ) ಬಹುಮಾನ ನೀಡಲಾಗುತ್ತದೆ. ವಿಜೇತರಿಗೆ ಪ್ರಶಸ್ತಿ ಪತ್ರ, ಪುಸ್ತಕಗಳು ಹಾಗೂ ನಗದು ರೂಪದಲ್ಲಿ ಬಹುಮಾನವನ್ನು ‘ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ’ ಯ ದಿನದಂದು ಬೆಳಗ್ಗೆ 11.30 ಗಂಟೆಗೆ ಕರ್ನಾಟಕ ಕಲಾಮಂದಿರದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ನೀಡಲಾಗುವುದು.
ಈ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವ ಆಸಕ್ತ ವಿದ್ಯಾರ್ಥಿಗಳ URL https://forms.gle/SkMT6PYZbAt6yizv6 ಮೂಲಕ ನೋಂದಾಯಿಸಿಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂ. ಸಂ.: 0821-2513225 ಅನ್ನು ಸಂಪರ್ಕಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ. ಡಿ. ಸುದರ್ಶನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














