ಮನೆ ರಾಜಕೀಯ ರಾಜ್ಯ ಪೊಲೀಸ್ ಇಲಾಖೆ ಸಂಘ ಪರಿವಾರದ ಕೈಗೊಂಬೆಯಾಗಿದೆ: ಸಿದ್ದರಾಮಯ್ಯ ಆರೋಪ

ರಾಜ್ಯ ಪೊಲೀಸ್ ಇಲಾಖೆ ಸಂಘ ಪರಿವಾರದ ಕೈಗೊಂಬೆಯಾಗಿದೆ: ಸಿದ್ದರಾಮಯ್ಯ ಆರೋಪ

0

ಬೆಂಗಳೂರು(Bengaluru): ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮ‌ಯ್ಯ ಆರೋಪಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಲು ಗುರುವಾರ ಬಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕೋಳಿಮೊಟ್ಟೆ ಎಸೆದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು.

ಘಟನೆಯನ್ನು ಖಂಡಿಸಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ರಾಜ್ಯ ಪೊಲೀಸ್ ಇಲಾಖೆ ಸಂಘ ಪರಿವಾರದ ಕೈಗೊಂಬೆಯಾಗಿದೆ. ಬಿಜೆಪಿ ಪಕ್ಷದ ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುತ್ತಿದೆ ಎಂದು ಆರೋಪಿಸಿದ್ದಾರೆ.

ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಇದೇ 26ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ . ಬಿಜೆಪಿಯವರ ಗೂಂಡಾಗಿರಿಗೆ ಹೋರಾಟದ ಮೂಲಕವೇ ತಕ್ಕ ಉತ್ತರ ಕೊಡುತ್ತೇವೆ ಎಂದು ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹೆಜ್ಜೆಹೆಜ್ಜೆಗೂ ಬಿಜೆಪಿ ಕಾರ್ಯಕರ್ತರು ಕಪ್ಪುಬಾವುಟ ಪ್ರದರ್ಶಿಸಿದ್ದಾರೆ. ಇದು ಹೇಡಿಗಳ ಕೃತ್ಯವಾಗಿದೆ. ಪೊಲೀಸ್ ಇಲಾಖೆ ಭದ್ರತೆ ನೀಡಲು ವಿಫಲವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಮೊಟ್ಟೆ ಎಸೆತ: ಬೊಮ್ಮಾಯಿ ಖಂಡನೆ

ಸಿದ್ದರಾಮಯ್ಯನವರ ಕೊಡಗು ಪ್ರವಾಸದ ವೇಳೆ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಸಿಎಂ‌ ಬೊಮ್ಮಾಯಿ, ಯಾರ ಬಗೆಗಾದರೂ ಭಿನ್ನಾಭಿಪ್ರಾಯ ಇದ್ದರೆ, ಅದನ್ನು ಬಲವಾದ ಅಭಿಪ್ರಾಯಗಳೊಂದಿಗೆ ವಿರೋಧಿಸಬೇಕೇ ವಿನಃ ದೈಹಿಕ ಕಾರ್ಯದಿಂದಲ್ಲ. ಸಿದ್ದರಾಮಯ್ಯನವರು, ವಿರೋಧ ಪಕ್ಷದ ನಾಯಕರಾಗಿದ್ದು, ಆ ಸ್ಥಾನಕ್ಕೆ ತನ್ನದೇ ಆದ ಗೌರವ ಇದೆ. ಗೌರವಿಸುವುದನ್ನು ಎಲ್ಲರೂ ಪಾಲಿಸಬೇಕು ಎಂದು ತಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.