ಮನೆ ಸುದ್ದಿ ಜಾಲ ಮೈಸೂರು ಜಿಲ್ಲಾ ಮತಗಟ್ಟೆಗಳಿಗೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್‌. ವಸ್ತ್ರದ್ ಭೇಟಿ

ಮೈಸೂರು ಜಿಲ್ಲಾ ಮತಗಟ್ಟೆಗಳಿಗೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್‌. ವಸ್ತ್ರದ್ ಭೇಟಿ

0

ಮೈಸೂರು: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ಅಂಗವಾಗಿ ಜಿಲ್ಲೆಯಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆಗಳಿಗೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ್ ಅವರು ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.

ಮೈಸೂರು ನಗರದ ಬನ್ನಿಮಂಟಪ ಹುಡ್ಕೊ ಹಾಗೂ ಜ್ಯೋತಿ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಬೇಸ್ ಕಾಲೇಜಿಗೆ ಭೇಟಿ ನೀಡಿದರು. ನಂತರ ಮೈಸೂರು ತಾಲ್ಲೂಕಿನ ಜಯಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಲಿಗರ ಕಾಲೋನಿಗೆ ಭೇಟಿ ನೀಡಿ, ಮತಗಟ್ಟೆಯಲ್ಲಿ ರಾಂಪ್ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ನೆರಳಿನ ಸೌಕರ್ಯ, ಶೌಚಾಲಯ, ಕಟ್ಟಡದ ಸುಸ್ಥಿತಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ವೀಕ್ಷಿಸಿದರು.

ಕಳೆದ ಬಾರಿಯ 2018ರ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆಗಳಲ್ಲಿ ಮುಂಬರುವ ಚುನಾವಣೆಯಲ್ಲಿ ಮತದಾನ ಹೆಚ್ಚಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಸ್ವೀಪ್ ಚಟುವಟಿಕೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ಮತದಾರರಿಗೆ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಸೋಲಿಗರ ಕಾಲೋನಿಯ ನಿವಾಸಿಗಳ ಜೊತೆ ಮಾತನಾಡಿದ ಅವರು, ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಚುನಾವಣೆಯ ಮತದಾನದ ಬಗ್ಗೆ ಯಾವುದೇ ಗೊಂದಲಗಳಿದ್ದರೆ ಸ್ಥಳೀಯ ಆಡಳಿತವನ್ನು ಸಂಪರ್ಕ ಮಾಡುವುದು ಹಾಗೂ 1950 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಹೇಳಿದರು.

ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎಂ.ಗಾಯಿತ್ರಿ ಅವರು, ಉಪ ಕಾರ್ಯದರ್ಶಿ (ಅಭಿವೃದ್ಧಿ) ಡಾ.ಎಂ.ಕೃಷ್ಣರಾಜು ಅವರು, ಸಹಾಯಕ ನಿರ್ದೆಶಕರಾದ ವಿಶ್ವನಾಥ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ.ಗಿರೀಶ್, ಸಹಾಯಕ ನಿರ್ದೇಶಕರಾದ ಕೆ.ಎಂ.ರಘುನಾಥ್, ಪಿಡಿಒ ಬಸವಣ್ಣ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಹಿಂದಿನ ಲೇಖನಬಿಜೆಪಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ: ಸಿದ್ದರಾಮಯ್ಯ
ಮುಂದಿನ ಲೇಖನಜೂನ್ 24 ರಂದು ರಾಷ್ಟ್ರೀಯ ಲೋಕ್ ಅದಾಲತ್