ಮನೆ ರಾಜಕೀಯ ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಿದ ರಾಜ್ಯ : ಬಜೆಟ್; ಸಚಿವ ಕೆ.ಗೋಪಾಲಯ್ಯ

ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಿದ ರಾಜ್ಯ : ಬಜೆಟ್; ಸಚಿವ ಕೆ.ಗೋಪಾಲಯ್ಯ

0

ಮಂಡ್ಯ; ನಾಡಿನ ರೈತರು ಮತ್ತು ಮಹಿಳೆಯರ ಪರವಾಗಿ ಮತ್ತು ಆರೋಗ್ಯ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳು ಹೆಚ್ಚಿನ ಒತ್ತು ನೀಡಿ ಬಜೆಟ್ ಮಂಡಿಸಿದ್ದಾರೆ ಎಂದು ಅಬಕಾರಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.

ಜಿಲ್ಲೆಯ ಕೃಷ್ಣರಾಜಪೇಟೆಯ ಇಂಜಿನಿಯರಿAಗ್ ಕಾಲೇಜಿನ ಆವರಣದಲ್ಲಿಂದು ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಆರೋಗ್ಯ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಚಿವ ಡಾ.ಕೆ.ಸಿ.ನಾರಾಯಣಗೌಡರು ಮತ್ತು ನಾನು ಜೊತೆಯಾಗಿ ಕೆಲಸ ಮಾಡುತ್ತಿದ್ದೇವೆ. ಇದೇ ತಿಂಗಳ 19 ರಂದು ಮಂಡ್ಯ ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದರು.

ಡಾ.ಕೆ.ನಾರಾಯಣಗೌಡರು ಮಂಡ್ಯದ ಮಣ್ಣಿನ ಮಗ. ಜಿಲ್ಲೆಯ ಎಲ್ಲ ತಾಲ್ಲೂಕುಗಳ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ದುಡಿಯುತ್ತಿದ್ದೇವೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರದಿಂದ ಇನ್ನೂ ಹೆಚ್ಚಿನ ಅನುದಾನ ತರಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸಚಿವ ಕೆ.ಸಿ.ನಾರಾಯಣಗೌಡ, ಜಿಲ್ಲಾಧಿಕಾರಿ ಅಶ್ವತಿ,. ಜಿಪಂ ಕಾರ್ಯನಿರ್ವಹಣಾಧಿಕಾರಿ ದಿವ್ಯಪ್ರಭು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಹಿಂದಿನ ಲೇಖನಮುಸ್ಲಿಂ ಗೂಂಡಾಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು: ಕೆ.ಎಸ್ ಈಶ್ವರಪ್ಪ ಆಗ್ರಹ
ಮುಂದಿನ ಲೇಖನಮಸೀದಿ ಮೇಲಿನ ದಾಳಿ ಹೊಣೆ ಹೊತ್ತ ಐಎಸ್