ಮನೆ ರಾಜ್ಯ ಜುಲೈ 15 ರೊಳಗೆ ಬಿಲ್ ಹಣ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ: ಸರ್ಕಾರಕ್ಕೆ ಗುತ್ತಿಗೆದಾರರ ಸಂಘ...

ಜುಲೈ 15 ರೊಳಗೆ ಬಿಲ್ ಹಣ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ: ಸರ್ಕಾರಕ್ಕೆ ಗುತ್ತಿಗೆದಾರರ ಸಂಘ ಎಚ್ಚರಿಕೆ

0

ಬೆಂಗಳೂರು:  ಬಾಕಿ ಇರುವ ಬಿಲ್​​ ಹಣವನ್ನು ಜುಲೈ 15ರೊಳಗೆ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ  ಮಾಡಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ.

Join Our Whatsapp Group

ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕಾಮಗಾರಿ ಬಿಲ್​ ತಡೆಹಿಡಿಯಲಾಗಿದೆ. ಈ ಹಿನ್ನೆಲೆ ಗುತ್ತಿಗೆದಾರರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಬಿಲ್​ ಮೊತ್ತ ಬಿಡುಗಡೆಗೆ ಆಗ್ರಹಿಸಿತ್ತು. ಸಂಘದ ಮನವಿಗೆ ಸ್ಪಂದಿಸಿದ್ದ ಸಿಎಂ ಸಿದ್ಧರಾಮಯ್ಯ ಜೂನ್ 28ರಂದು ಸುತ್ತೋಲೆ ಹೊರಡಿಸಿತ್ತು.

ಆದರೆ ಇದೀಗ ಸುತ್ತೋಲೆ ಹೊರಡಿಸಿ ಒಂದು ವಾರ ಕಳೆದರೂ ಬಿಲ್​ ಮೊತ್ತ ಬಿಡುಗಡೆಯಾಗಿಲ್ಲ. ಒಂದೂವರೆ ತಿಂಗಳಿಂದ ಹಣ ಬಿಡುಗಡೆ ಮಾಡದಿದ್ದರಿಂದ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಣ್ಣೊರೆಸುವ ತಂತ್ರ ಕೈಬಿಟ್ಟು ಕಾಮಗಾರಿ ಬಿಲ್ ಬಿಡುಗಡೆ ಮಾಡಬೇಕು. ಜುಲೈ 15ರೊಳಗೆ ಬಿಲ್ ಮೊತ್ತ ಬಿಡುಗಡೆ ಮಾಡದಿದ್ದರೇ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಗುತ್ತಿಗೆದಾರರ ಸಂಘ ಎಚ್ಚರಿಸಿದೆ.