ಮನೆ ರಾಷ್ಟ್ರೀಯ ಸ್ಟೀಲ್ ಮ್ಯಾನ್ ಆಫ್ ಇಂಡಿಯಾ ಖ್ಯಾತಿಯ ಜಮ್ಶೆಡ್‌ ಜೆ ಇರಾನಿ ನಿಧನ

ಸ್ಟೀಲ್ ಮ್ಯಾನ್ ಆಫ್ ಇಂಡಿಯಾ ಖ್ಯಾತಿಯ ಜಮ್ಶೆಡ್‌ ಜೆ ಇರಾನಿ ನಿಧನ

0

ನವದೆಹಲಿ(Newdelhi): ಸ್ಟೀಲ್ ಮ್ಯಾನ್ ಆಫ್ ಇಂಡಿಯಾ ಖ್ಯಾತಿಯ ಜಮ್ಶೆಡ್‌ ಜೆ ಇರಾನಿ ಅವರು ಸೋಮವಾರ ರಾತ್ರಿ ನಿಧನರಾದರು ಎಂದು ಟಾಟಾ ಸ್ಟೀಲ್‌ ತಿಳಿಸಿದೆ.

ಇರಾನಿ ಅವರಿಗೆ 86 ವರ್ಷ ವಯಸ್ಸಾಗಿತ್ತು.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಟಾಟಾ ಸ್ಟೀಲ್‌, ಭಾರತದ ಉಕ್ಕಿನ ಮನುಷ್ಯ ನಿಧನರಾಗಿದ್ದಾರೆ. ಪದ್ಮಭೂಷಣ ಡಾ. ಜಮ್ಶೆಡ್ ಜೆ ಇರಾನಿ ಅವರ ನಿಧನದ ಸುದ್ದಿಯನ್ನು ಟಾಟಾ ಸ್ಟೀಲ್ ತೀವ್ರ ದುಃಖದೊಂದಿಗೆ ತಿಳಿಸುತ್ತಿದೆ. ಜೆಮ್ಶೆಡ್‌ಪುರದಲ್ಲಿರುವ ಟಾಟಾ ಆಸ್ಪತ್ರೆಯಲ್ಲಿ ಅಕ್ಟೋಬರ್‌ 31ರ ರಾತ್ರಿ 10ರ ವೇಳೆಗೆ ಇರಾನಿ ನಿಧನರಾದರು ಎಂದು ತಿಳಿಸಿದೆ.

ಇರಾನಿ ಅವರು 2011ರ ಜೂನ್‌ನಲ್ಲಿ ಟಾಟಾ ಸ್ಟೀಲ್ ಮಂಡಳಿಯಿಂದ ನಿವೃತ್ತರಾಗಿದ್ದರು.

ಅವರು ಜಿಜಿ ಇರಾನಿ ಮತ್ತು ಖೋರ್ಶೆಡ್‌ ಇರಾನಿ ದಂಪತಿಯ ಮಗನಾಗಿ 1936ರ ಜೂನ್‌ 2ರಂದು ನಾಗ್ಪುರದಲ್ಲಿ ಜನಿಸಿದ್ದರು. ನಾಗ್ಪುರದ ವಿಜ್ಞಾನ ಕಾಲೇಜಿನಲ್ಲಿ 1956ರಲ್ಲಿ ಬಿಎಸ್‌ಸಿ ಮತ್ತು ನಾಗ್ಪುರ ವಿಶ್ವವಿದ್ಯಾಲಯದಲ್ಲಿ 1958ರಲ್ಲಿ ಭೂವಿಜ್ಞಾನ ವಿಷಯದಲ್ಲಿ ಎಂಎಸ್‌ಸಿ ಪದವಿ ಪಡೆದಿದ್ದರು.

ಬಳಿಕ ಜೆಎನ್ ಟಾಟಾ ವಿದ್ಯಾರ್ಥಿ ವೇತನ ಪಡೆದು ಇಂಗ್ಲೆಂಡ್‌ ತೆರಳಿ ಶೆಫಿಲ್ಡ್‌ ವಿಶ್ವವಿದ್ಯಾಲಯದಲ್ಲಿ ಲೋಹಶಾಸ್ತ್ರ ವಿಭಾಗದಲ್ಲಿ ಸ್ನಾತಕೋತ್ತರ ಪದವಿ (1960) ಮತ್ತು ಪಿಎಚ್‌ಡಿ (1963) ಪೂರ್ಣಗೊಳಿಸಿದ್ದರು.

ಹಿಂದಿನ ಲೇಖನರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿಯಲ್ಲಿ ಉದ್ಯೋಗಾವಕಾಶ
ಮುಂದಿನ ಲೇಖನಚುನಾವಣಾ ಆಯೋಗಕ್ಕೆ ಸುಳ್ಳು ಪ್ರಮಾಣ ಪತ್ರ: ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲು