ಮನೆ ಅಪರಾಧ ಮಸೀದಿಗೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ: ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ

ಮಸೀದಿಗೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ: ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ

0

ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರು ನಗರದ ಕೃಷ್ಣಾಪುರ ಮುಸ್ಲಿಂ ಜಮಾಅತ್ ಗೆ ಒಳಪಡುವ ಕಾಟಿಪಳ್ಳ 3ನೇ ಬ್ಲಾಕ್ ನ‌ ಮಸ್ಜಿದುಲ್ ಹುದಾ ಜುಮಾ ಮಸೀದಿಗೆ ಎರಡು ಬೈಕ್ ಗಳಲ್ಲಿ ಬಂದಿದ್ದ ಐವರು ದುಷ್ಕರ್ಮಿಗಳ ತಂಡ ಕಲ್ಲು ತೂರಾಟ ನಡೆಸಿರುವ ಘಟನೆ ರಾತ್ರಿ ನಡೆದಿದೆ.‌

Join Our Whatsapp Group

ಜನತಾ ಕಾಲನಿ ಸ್ಮಶಾನದ ಕಡೆಯಿಂದ ಎರಡು ಬೈಕ್ ಗಳಲ್ಲಿ ಬಂದಿದ್ದ ದುಷ್ಕರ್ಮಿಗಳು, ಮಸೀದಿಯ ಹಿಂಭಾಗದ ಕಿಟಕಿಗಳ‌ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳದಲ್ಲಿ ಜನ ಜಮಾಯಿಸಲು ಆರಂಭಿಸಿದ್ದಾರೆ. ತಕ್ಷಣ ಸೇರಿದ್ದ ಜನರನ್ನು ಪೊಲೀಸರು ಚದುರಿಸಿದರು.

ಘಟನಾ ಸ್ಥಳಕ್ಕೆ ಘಟನಾ ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್, ಕಾನುನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ಧಾರ್ಥ್ ಗೋಯಲ್, ಪಣಂಬೂರು ಉಪ ವಿಭಾಗದ ಎಸಿಪಿ ಶ್ರೀಕಾಂತ್, ಸುರತ್ಕಲ್ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್, ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮುಹಮ್ಮದ್ ಸಲೀಮ್ ಅಬ್ಬಾಸ್, ಬಜ್ಪೆ ಪೊಲೀಸ್ ನಿರೀಕ್ಷಕ ಸಂದೀಪ್ ಜಿ.ಎಸ್., ಸುರತ್ಕಲ್ ಪೊಲೀಸ್ ಉಪ ನಿರೀಕ್ಷಕ ರಘುನಾಯಕ್ ಮೊದಲಾದವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.