ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಶಿಕಾರಿಪುರ ಮನೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಶಿಕಾರಿಪುರಕ್ಕೆ ಭೇಟಿ ನೀಡಿ ಘಟನೆ ಕುರಿತು ಮಾಹಿತಿ ಪಡೆದಿದ್ದಾರೆ.
ಶಿಕಾರಿಪುರದ ಪ್ರವಾಸಿ ಮಂದಿರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಜೊತೆ ಸಚಿವ ಆರಗ ಜ್ಞಾನೇಂದ್ರ ಚರ್ಚಿಸಿದ್ದಾರೆ. ಕೇಸ್ ದಾಖಲಿಸಬೇಡಿ ಎಂದು ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ. ಆದರೆ ಕಲ್ಲುತೂರಾಟ ವೇಳೆ ಕೆಲವು ಪೊಲೀಸರಿಗೆ ಪೆಟ್ಟು ಬಿದ್ದಿದೆ. ಈ ಘಟನೆ ಕುರಿತು ತನಿಖೆ ಮಾಡುತ್ತೇವೆ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಶಿಕಾರಿಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಈ ಗಲಾಟೆಯಲ್ಲಿ ಕೆಲವರು ಕ್ರಿಮಿನಲ್ ಹಿನ್ನೆಲೆಯುಳ್ಳವರಿದ್ದಾರೆ ಎಂದು ತಿಳಿಸಿದರು.
ಇಂದು ಕೂಡ ಮುಂದುವರೆದ ಪ್ರತಿಭಟನೆ
ಒಳಮೀಸಲಾತಿ ಜಾರಿಗೆಗೆ ಬಂಜಾರ ಸಮುದಾಯ ವಿರೋಧ ವ್ಯಕ್ತಪಡಿಸಿದ್ದು, ಸಮುದಾಯದವರು ಇಂದು (ಮಾ.28) ಕೂಡ ಶಿವಮೊಗ್ಗ ತಾಲೂಕಿನ ಕುಂಚೇನಹಳ್ಳಿ ಗ್ರಾಮದಲ್ಲಿ ರಸ್ತೆ ತಡೆದು, ಟೈರ್ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಳ ಮೀಸಲಾತಿ ಹಿಂಪಡೆಯುವೆಂತೆ ಬಂಜಾರ ಸಮಾಜ ಸರ್ಕಾರಕ್ಕೆ ಒತ್ತಾಯಿಸಿದೆ.