ಮನೆ ರಾಜಕೀಯ ವಿಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನ ಕೈಬಿಡಿ: ವಿಪಕ್ಷ ನಾಯಕ ಸಿದ್ಧರಾಮಯ್ಯ

ವಿಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನ ಕೈಬಿಡಿ: ವಿಪಕ್ಷ ನಾಯಕ ಸಿದ್ಧರಾಮಯ್ಯ

0

ಬೆಂಗಳೂರು: ಇಡಿ ಮೂಲಕ ಕಾಂಗ್ರೆಸ್ ನ್ನು ಹೆದರಿಸುತ್ತೇವೆಂಬ ಭ್ರಮೆಯಲ್ಲಿ  ಬಿಜೆಪಿ ನಾಯಕರಿದ್ದಾರೆ. ವಿಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನ ಕೈಬಿಡಿ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಗುಡುಗಿದರು.

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜಾರಿ ನಿರ್ದೇಶನಾಲಯದ ಸಮನ್ಸ್ ನೀಡಿರುವುದನ್ನು ಖಂಡಿಸಿ ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಿಎಂ  ಸಿದ್ಧರಾಮಯ್ಯ, ಇದು ಸಾಂಕೇತಿಕ ಪ್ರತಿಭಟನೆ ಅಷ್ಟೆ.  ಮುಂದೆ ದೇಶಾದ್ಯಂತ ಪ್ರತಿಭಟನೆ ನಡೆಸುತ್ತೇವೆ  ಇಡಿ ಮೂಲಕ ಕಾಂಗ್ರೆಸ್ ಹೆದುರಿಸುತ್ತೇವೆಂಬ ಭ್ರಮೆಯಲ್ಲಿ  ಬಿಜೆಪಿ ನಾಯಕರಿದ್ದಾರೆ.  ವಿಪಕ್ಷಗಳನ್ನ ಹತ್ತಿಕ್ಕುವ ಪ್ರಯತ್ನ ಕೈಬಿಡಿ.  ಇಲ್ಲದಿದ್ದರೇ ಸರ್ಕಾರಿ ಕಚೇರಿ ಬಂದ್ ಮಾಡಿಸ್ತೇವೆ ಎಂದು ಎಚ್ಚರಿಕೆ ನೀಡಿದರು.

ಸಿದ್ದರಾಮಯ್ಯ ಸೇರಿ ಹಲವರನ್ನು ವಶಕ್ಕೆ ಪಡೆದ ಪೊಲೀಸರು:

ಇಡಿ ಕಚೇರಿಗೆ ತೆರಳಲು ಉದ್ದೇಶಿತ ಮೆರವಣಿಗೆಗಾಗಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ಉದ್ದಕ್ಕೂ ಬಿಜೆಪಿ, ಪ್ರಧಾನಿ ಮೋದಿ ವಿರುದ್ಧ ಧಿಕ್ಕಾರ ಕೂಗುತ್ತಿದ್ದರು. ಕಾಂಗ್ರೆಸ್​ ಮೆರವಣಿಗೆ ಇಡಿ ಕಚೇರಿ ಸಮೀಪಿಸುತ್ತದಂತೆ ಪೊಲೀಸರು ಬ್ಯಾರಿಕೇಡ್ ಹಾಕಿ ತಡೆದರು. ಈ ವೇಳೆ, ಕಾಂಗ್ರೆಸ್ ಕಾರ್ಯಕರ್ತರು ಬ್ಯಾರಿಕೇಡ್ ಹತ್ತಿ ಆಕ್ರೋಶ ವ್ಯಕ್ತಪಡಿಸಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಾಸಕ ಪ್ರಿಯಾಂಕ್ ಖರ್ಗೆ, ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಸೇರಿದಂತೆ ನೂರಾರು ಕಾರ್ಯಕರ್ತರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪೊಲೀಸರ ಜೊತೆ ವಾಗ್ವಾದಕ್ಕಿಳಿದರು. ಈ ವೇಳೆ, ಪೊಲೀಸರು ಸಿದ್ದರಾಮಯ್ಯ ಸೇರಿದಂತೆ ಹಲವಾರು ಕಾಂಗ್ರೆಸ್​ ನಾಯಕರನ್ನು ವಶಕ್ಕೆ ಪಡೆದರು.