ಮನೆ ರಾಜಕೀಯ ಮತದಾನದ ಮೂಲಕ ಪ್ರಜಾಪ್ರಭುತ್ವ ಬಲಪಡಿಸಿ: ಪ್ರಧಾನಿ

ಮತದಾನದ ಮೂಲಕ ಪ್ರಜಾಪ್ರಭುತ್ವ ಬಲಪಡಿಸಿ: ಪ್ರಧಾನಿ

0

ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ನಾಲ್ಕನೇ ಹಂತದ ಮತದಾನ ಆರಂಭವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಇತರ ಸಚಿವರು ಟ್ವೀಟ್ ಮಾಡಿ, ಮತದಾನ ಮಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು,  ಮತದಾನದ ಹಕ್ಕು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಲು ಕೊಡುಗೆ ನೀಡುವಂತೆ ಜನತೆಗೆ ಮನವಿ ಮಾಡಿದ್ದಾರೆ.

Advertisement
Google search engine

, ‘ಇಂದು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ನಡೆಯುತ್ತಿದೆ. ಎಲ್ಲಾ ಮತದಾರರು ತಮ್ಮ ಅಮೂಲ್ಯವಾದ ಮತಗಳನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಲು ತಮ್ಮ ಕೊಡುಗೆ ನೀಡಬೇಕೆಂದು ನಾನು ವಿನಂತಿಸುತ್ತೇನೆ’ ಎಂದು ಹೇಳಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ , ನಿಮ್ಮ ಒಂದು ಮತವು ರಾಜ್ಯದ ಕೋಟ್ಯಂತರ ಬಡ ಜನರ ಗೌರವ ಮತ್ತು ಹಕ್ಕುಗಳನ್ನು ರಕ್ಷಿಸಲು ಹಾಗೂ ರಾಜ್ಯವನ್ನು ಭಯ, ಭ್ರಷ್ಟಾಚಾರ ಮತ್ತು ಮಾಫಿಯಾ ಭಯೋತ್ಪಾದನೆಯಿಂದ ಮುಕ್ತವಾಗಿಡಲು ಗಣನೀಯ ಕೊಡುಗೆ ನೀಡಲಿದೆ. ಹಾಗಾಗಿ ‘ಉತ್ಸಾಹದಿಂದ ಭಾಗವಹಿಸಿ’ ಎಂದು ಎಂದು ಮತದಾರರಿಗೆ ಕರೆ ನೀಡಿದರು.

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಕೂಡ ಟ್ವೀಟ್ ಮಾಡಿದ್ದು, ‘ಮತದಾರರು ತಮ್ಮ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಲು ತಮ್ಮ ಕೈಲಾದಷ್ಟು ಕೊಡುಗೆ ನೀಡುವಂತೆ ವಿನಂತಿಸಿದ್ದಾರೆ’.

ಹಿಂದಿನ ಲೇಖನಹರ್ಷ ಕೊಲೆ ಪ್ರಕರಣ: 8 ಜನರ ಬಂಧನ, ಶುಕ್ರವಾರದವರೆಗೆ ನಿಷೇಧಾಜ್ಞೆ ಮುಂದುವರಿಕೆ
ಮುಂದಿನ ಲೇಖನರಾಜ್ಯದಲ್ಲಿ ನಾಪತ್ತೆಯಾದ ಮಕ್ಕಳ ಪತ್ತೆಗೆ ಕೈಗೊಂಡಿರುವ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ