ಬೆಂಗಳೂರು(Bengaluru): ರಾಜ್ಯದ ಶಿಕ್ಷಕರ ಕಾರ್ಯ ವೈಖರಿ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಮಿತಿ ಸಚಿವ ಬಿ.ಸಿ.ನಾಗೇಶ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಶಾಲೆಗಳಿಗೆ ತಡವಾಗಿ ಬರುವ ಶಿಕ್ಷಕರಿಗೆ ಇದೇ ವೇಳೆ ಎಚ್ಚರಿಕೆಯ ಸಂದೇಶವನ್ನು ನೀಡಿದ್ದಾರೆ.
ಶಾಲಾ ಅವಧಿಯಲ್ಲಿ ಅನಧಿಕೃತವಾಗಿ ಗೈರು ಹಾಜರಾಗುವ, ತಡವಾಗಿ ತರಗತಿಗಳಿಗೆ ಬರುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಶಾಲೆಗಳಿಗೆ ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ರಾಜ್ಯದ ಶಿಕ್ಷಕರಿಗೆ ಸೂಚಿಸಿದ್ದಾರೆ ವಿನಾಕಾರಣ ತಡವಾದರೆ ಮಕ್ಕಳಿಗೆ ಶಾಲೆಯ ಹೊರಗಡೆ ಕಾಯಿಸಿದರೆ ಈ ಒಂದು ವಿಚಾರ ಕುರಿತು ಮಾಹಿತಿ ವರದಿಗಳು ಬಂದರೆ ಕೂಡಲೇ ಶಿಸ್ತು ಕ್ರಮದ ಎಚ್ಚರಿಕೆ ನೀಡಿದ್ದಾರೆ.
ಈ ಹಿಂದೆ ಅನಿರೀಕ್ಷಿತವಾಗಿ ನಾಗಮಂಗಲ ತಾಲ್ಲೂಕು ನೆಲ್ಲಿಗೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ಕೊಟ್ಟಾಗ ಯಾವ ಶಿಕ್ಷಕರೂ ಶಾಲೆಗೆ ಬಂದಿರಲಿಲ್ಲ. ಮಕ್ಕಳು ಶಾಲಾ ಆವರಣದಲ್ಲೇ ಕುಳಿತಿದ್ದರು. ಸುಮಾರು 10.30 ಆದರೂ ಮಕ್ಕಳು ಅಲ್ಲಿಯವರೆಗೂ ಶಾಲೆಯಿಂದ ಹೊರಗೆ ಕಾಯುತ್ತಿದ್ದರು.
ರಾಜ್ಯದ ಯಾವ ಶಾಲೆಗಳಲ್ಲೂ ಇಂತಹ ಘಟನೆಗಳು ಮರುಕಳಿಸಬಾರದು. ಮಕ್ಕಳ ಬೋಧನೆ, ಸುರಕ್ಷತೆಗೆ ಅಡ್ಡಿಯಾಗುವ ಶಿಕ್ಷಕರ ನಡೆ ಕ್ಷಮಿಸಲು ಸಾಧ್ಯವಿಲ್ಲ. ಶಿಸ್ತುಕ್ರಮ ಜರುಗಿಸಬೇಕು ಎಂದು ತಾಕೀತು ಮಾಡಿದ್ದಾರೆ. ಶಿಕ್ಷಣದಿಂದ ವಂಚಿತರಾಗುವುದಲ್ಲದೆ ಮಕ್ಕಳ ಸುರಕ್ಷತೆಗೂ ಧಕ್ಕೆಯಾಗಿದೆ. ಹೀಗಾಗಿ ಈ ನಿರ್ದೇಶನ ನೀಡಲಾಗುತ್ತಿದೆ ಎಂದು ನಾಗೇಶ್ ತಿಳಿಸಿದರು.