ಮನೆ ರಾಜಕೀಯ ಹೆಣ್ಣು ಭ್ರೂಣ ಹತ್ಯೆ ತಡೆಗೆ ಕಠಿಣ ಕ್ರಮ: ದಿನೇಶ್ ಗುಂಡೂರಾವ್

ಹೆಣ್ಣು ಭ್ರೂಣ ಹತ್ಯೆ ತಡೆಗೆ ಕಠಿಣ ಕ್ರಮ: ದಿನೇಶ್ ಗುಂಡೂರಾವ್

0

ಬೆಂಗಳೂರು: ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಹಾಗೂ ಭ್ರೂಣ ಲಿಂಗ ಪತ್ತೆಯನ್ನು ಸಂಪೂರ್ಣವಾಗಿ ಮಟ್ಟಹಾಕಲು ನಮ್ಮ ಆರೋಗ್ಯ ಇಲಾಖೆ ಈಗಾಗಲೇ ಕಾರ್ಯೋನ್ಮುಖವಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Join Our Whatsapp Group

ಮಂಡ್ಯ ಜಿಲ್ಲೆಯಲ್ಲಿ ಭ್ರೂಣ ಹತ್ಯೆ ಮಾತ್ರೆ ಮಾರಾಟದ ಲೆಕ್ಕ ನೀಡದ ಸಗಟು ಔಷಧ ಮಾರಾಟಗಾರರು ಹಾಗೂ ಚಿಲ್ಲರೆ ಔಷಧ ಅಂಗಡಿ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ೪ ಔಷಧ ಅಂಗಡಿಗಳನ್ನು ಬಂದ್ ಮಾಡಿಸಲಾಗಿದ್ದು ೩೦ ಅಂಗಡಿಗಳ ಲೈಸೆನ್ಸ್ ಸಸ್ಪೆಂಡ್ ಮಾಡಲಾಗಿದೆ. ಜೊತೆಗೆ ನಾಲ್ವರು ಔಷಧ ವಿತರಕರ ವಿರುದ್ಧ ಕೇಸ್ ದಾಖಲಿಸಲಾಗುತ್ತಿದೆ ಎಂದರು.

ಸಾಮಾಜಿಕ ಪಿಡುಗಾಗಿರುವ ಹೆಣ್ಣು ಭ್ರೂಣ ಹತ್ಯೆ ಹಾಗೂ ಭ್ರೂಣ ಲಿಂಗ ಪತ್ತೆಯನ್ನು ರಾಜ್ಯದಲ್ಲಿ ಸಂಪೂರ್ಣವಾಗಿ ತಡೆಯುವುದೇ ನಮ್ಮ ಆರೋಗ್ಯ ಇಲಾಖೆ ಆದ್ಯತೆಯಾಗಿದ್ದು ಈ ನಿಟ್ಟಿನಲ್ಲಿ ಸರ್ವ ರೀತಿಯಲ್ಲಿಯೂ ನಮ್ಮ ಆರೋಗ್ಯ ಇಲಾಖೆ ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದಾರೆ ಎಂದು ಹೇಳಿದ್ದಾರೆ.