ಮನೆ ರಾಜ್ಯ ‘ಗೃಹ ಜ್ಯೋತಿ’ ಯೋಜನೆ ನೋಂದಣಿಗೆ 20 ರೂ.ಗಿಂತ ಹೆಚ್ಚುವರಿ ಹಣ ವಸೂಲಿ ಮಾಡಿದರೆ ಕಠಿಣ ಕ್ರಮ

‘ಗೃಹ ಜ್ಯೋತಿ’ ಯೋಜನೆ ನೋಂದಣಿಗೆ 20 ರೂ.ಗಿಂತ ಹೆಚ್ಚುವರಿ ಹಣ ವಸೂಲಿ ಮಾಡಿದರೆ ಕಠಿಣ ಕ್ರಮ

0

ಬೆಂಗಳೂರು: ರಾಜ್ಯದಲ್ಲಿ ಗ್ರಾಹಕರಿಗೆ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನ್ನು ಒದಗಿಸುವ ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಸಲು ಹಣ ಕೇಳುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.

Join Our Whatsapp Group

ಗೃಹ ಜ್ಯೋತಿಯ ನೋಂದಣಿ ಸಂಪೂರ್ಣ ಉಚಿತವಾಗಿದೆ, ಸರ್ಕಾರ ನಿಗದಿಪಡಿಸಿದ ಸೇವಾ ಶುಲ್ಕ 20 ರೂಪಾಯಿಗಳನ್ನು ಹೊರತುಪಡಿಸಿ ನೋಂದಣಿಗಾಗಿ ಗ್ರಾಹಕರು ಹೆಚ್ಚುವರಿ ಮೊತ್ತವನ್ನು ಪಾವತಿಸಬೇಕಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಗ್ರಾಹಕರಿಂದ 20 ರೂಪಾಯಿಗಿಂತ ಹೆಚ್ಚುವರಿ ನೋಂದಣಿ ಶುಲ್ಕ ವಸೂಲಿ ಮಾಡುತ್ತಿರುವ ಪ್ರಕರಣಗಳು ಸರ್ಕಾರದ ಗಮನಕ್ಕೆ ಬಂದಿದೆ. ಯಾವುದೇ ಕೇಂದ್ರಗಳು ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರ್ಕಾರದ ಅಧಿಕೃತ ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸುವ ಸಾರ್ವಜನಿಕರಿಂದ ಹಣ ಪಡೆದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು.

ನಂತರ ಈ ಬಗ್ಗೆ ಟ್ವೀಟ್ ಕೂಡ ಮಾಡಿರುವ ಅವರು ಗೃಹ ಜ್ಯೋತಿ ಯೋಜನೆಗೆ ಅರ್ಜಿ ಹಾಕಲು ಕೆಲವರು ವೈಯಕ್ತಿಕವಾಗಿ ಹಾಗೂ ಕೆಲವು ಏಜೆನ್ಸಿ ಮೂಲಕ ಸಾರ್ವಜನಿಕರಿಂದ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಅರ್ಜಿ ಸಲ್ಲಿಸಲು ನೀವು ಯಾರಿಗೂ ಲಂಚ ನೀಡಬೇಕಾಗಿಲ್ಲ. ನೀವೇ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇದಕ್ಕೆ ಸಾರ್ವಜನಿಕರಿಂದ ಹಣ ಪಡೆಯುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಹಿಂದಿನ ಲೇಖನಪತಿಯ ಕಿರುಕುಳಕ್ಕೆ ಬೇಸತ್ತು ಫೇಸ್ ಬುಕ್ ಲೈವ್ ನಲ್ಲಿ ಮಹಿಳೆ ಆತ್ಮಹತ್ಯೆ
ಮುಂದಿನ ಲೇಖನಇಂದು ಮಣಿಪುರ ಪರಿಸ್ಥಿತಿ ಕುರಿತು ಅಮಿತ್ ಶಾ ನೇತೃತ್ವದಲ್ಲಿ ಸರ್ವಪಕ್ಷ ಸಭೆ