ಮನೆ ಅಂತಾರಾಷ್ಟ್ರೀಯ ಟರ್ಕಿ, ಸಿರಿಯಾದಲ್ಲಿ ಪ್ರಬಲ ಭೂಕಂಪ: ಮೃತರ ಸಂಖ್ಯೆ 7926ಕ್ಕೆ ಏರಿಕೆ

ಟರ್ಕಿ, ಸಿರಿಯಾದಲ್ಲಿ ಪ್ರಬಲ ಭೂಕಂಪ: ಮೃತರ ಸಂಖ್ಯೆ 7926ಕ್ಕೆ ಏರಿಕೆ

0

ಅದಾನಾ/ಅಂಕಾರಾ (ಐಎಎನ್‌’ಎಸ್‌): ಟರ್ಕಿ ಮತ್ತು ಸಿರಿಯಾದಲ್ಲಿ ಸೋಮವಾರ ಸಂಭವಿಸಿದ ಪ್ರಬಲ ಭೂಕಂಪದಿಂದ 7926 ಜನರು ಸಾವನ್ನಪ್ಪಿದ್ದಾರೆ.

ಉಭಯ ದೇಶಗಳಲ್ಲಿ ಸಾವು– ನೋವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾವಿನ ಸಂಖ್ಯೆ 8000 ಸಾವಿರ ದಾಟಲಿದೆ. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ ಎಂದು ಎಂದು ಅಧಿಕಾರಿಗಳು ಹೇಳಿದ್ದಾರೆ.

ಉಭಯ ರಾಷ್ಟ್ರಗಳಲ್ಲಿ ಮೃತರ ಸಂಖ್ಯೆ ಬುಧವಾರ ಬೆಳಗ್ಗೆ 8 ಗಂಟೆಯವರೆಗೆ ಒಟ್ಟು 7926ಕ್ಕೆ ಏರಿದೆ. ಕಟ್ಟಡಗಳ ಅವಶೇಷಗಳಡಿ ಸಿಲುಕಿದವರ ರಕ್ಷಣೆ ಗಾಗಿ ತ್ವರಿತ ಕಾರ್ಯಾಚರಣೆ ಮುಂದುವರಿದಿದೆ.

ಟರ್ಕಿಯಲ್ಲಿ ಇಲ್ಲಿಯವರೆಗೂ 5,894 ಜನರು ಮೃತಪಟ್ಟಿದ್ದಾರೆ, 34,810 ಜನರು ಗಾಯಗೊಂಡಿದ್ದಾರೆ ಎಂದು ಟರ್ಕಿ ಉಪಾಧ್ಯಕ್ಷ ಮಾಹಿತಿ ನೀಡಿದ್ದಾರೆ. ಸಿರಿಯಾದಲ್ಲಿ ಸಾವಿನ ಸಂಖ್ಯೆ 2,032ಕ್ಕೆ ಏರಿಕೆಯಾಗಿದೆ. 2600ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸಿರಿಯಾ ಅಧಿಕಾರಿಗಳು ಹೇಳಿದ್ದಾರೆ.

ಅಸ್ಥಿರ ಕಟ್ಟಡಗಳು ಮತ್ತು ಕೊರೆಯುವ ಚಳಿ, ರಕ್ಷಣಾ ಕಾರ್ಯಕ್ಕೆ ಸವಾಲಾಗಿದೆ. ಉಭಯ ದೇಶಗಳಲ್ಲಿ 24,400ಕ್ಕೂ ಹೆಚ್ಚು ತುರ್ತುಸೇವಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಸಿರಿಯಾದ ಅಲೆಪ್ಪೊ ಮತ್ತು ಹಮಾ ನಗರ ಹಾಗೂ ಟರ್ಕಿಯ ದಿಯಾರ್‌ ಬಕೀರ್‌ವರೆಗೆ ಸಾವಿರಾರು ಕಟ್ಟಡಗಳು ಕುಸಿದಿವೆ. ಟರ್ಕಿಯ ಗಡಿ ಪ್ರದೇಶದಲ್ಲಿ ಸುಮಾರು 6 ಸಾವಿರ ಕಟ್ಟಡಗಳು ನೆಲಸಮವಾಗಿವೆ. ಆಗ್ನೇಯದ ಹತ್ತು ಪ್ರಾಂತ್ಯಗಳಲ್ಲಿ ಮೂರು ತಿಂಗಳ ಕಾಲ ತುರ್ತು ಸ್ಥಿತಿಯನ್ನು ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಘೋಷಣೆ ಮಾಡಿದ್ದಾರೆ.

ಭಾರತ, ಅಮೆರಿಕ, ಬ್ರಿಟನ್‌ ಸೇರಿ ವಿಶ್ವದ ಹಲವು ರಾಷ್ಟ್ರಗಳು ಸಂತ್ರಸ್ತರ ನೆರವಿಗಾಗಿ ಔಷಧ, ಪರಿಹಾರ ಸಾಮಗ್ರಿ ಹಾಗೂ ವಿಪತ್ತು ಸ್ಪಂದನಾ ಪಡೆಗಳನ್ನು ಟರ್ಕಿಗೆ ಕಳುಹಿಸಿವೆ.

ಹಿಂದಿನ ಲೇಖನಆರೋಪಿ ಮಹಿಳೆಯರ ಕನ್ಯತ್ವ ಪರೀಕ್ಷೆ ಅಸಾಂವಿಧಾನಿಕ: ದೆಹಲಿ ಹೈಕೋರ್ಟ್
ಮುಂದಿನ ಲೇಖನಸಾಲಕ್ಕೆ ಹೆದರಿ ನೇಣಿಗೆ ಶರಣಾದ ರೈತ